ಮೈಸೂರು

ಜೆಡಿಎಸ್‌ ವೀಕ್‌ ಪಾರ್ಟಿ : ಸಿಎಂ ಸಿದ್ದರಾಮಯ್ಯ ಗುಡುಗು

ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್‌ ಪಾರ್ಟಿ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಮಹರಾಜ ಕಾಲೇಜಿನ ಮೈದಾನದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.

2008 ಮತ್ತು 2018ರಲ್ಲಿ ಅಧೊಕಾರಕ್ಕೆ ಬಂದಾಗ ಏನು ಮಾಡಲಿಲ್ಲ. ಬಿಜೆಪಿ ಪೂರ್ಣ ಬಹುಮತದೊಂದಿಗೆ ಬರಲಿಲ್ಲ. 2008ರಲ್ಲಿ 110, 2018ರಲ್ಲಿ 111ಸೀಟುಗಳನ್ನು ಪಡೆದುಕೊಂಡಿತು. ಜಾ.ದಳ 2018ರಲ್ಲಿ ಕೇವಲ 18ಸೀಟುಗಳನ್ನು ಗೆದ್ದಿತು. ಜಾ.ದಳ ಪ್ರತಿಬಾರಿ ಕಡಿಮೆಯಾಗುತ್ತಿದೆ ಎಂದು ಟೀಕಿಸಿದರು.

ಇದೊಂದು ಶಕ್ತಿ ಪ್ರದರ್ಶನವಲ್ಲ. ಬಿಜೆಪಿ,ಜಾ.ದಳದವರು ಹೇಳುವ ಶಕ್ತಿ ಪ್ರದರ್ಶನವಲ್ಲ. ಅಭಿವೃದ್ದಿ ಶಕ್ತಿಯನ್ನು ಮುಂದಿಡುವ ಸಮಾವೇಶವಾಗಿದೆ. ಮತ್ಸರ ಇರಬೇಕು. ಆದರೆ, ಬಿಜೆಪಿ,ಜಾ.ದಳದ ನಾಯಕರಿಗೆ ಇಷ್ಟೊಂದು ಮತ್ಸರ ಇರಬಾರದು. ಸಹಿಸಿಕೊಳ್ಳಲಾಗದು. ಸುಳ್ಳುಹೇಳಿಕೊಂಡು ಜನರಿಗೆ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮೈಸೂರು ನಗರಕ್ಕೆ ಬಿಜೆಪಿ, ಜಾ.ದಳದವರ ಕೊಡುಗೆ ಏನಿಲ್ಲ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ,ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲ್ಲ. ಜಾ.ದಳದಲ್ಲಿ ಇರುವ ಶಾಸಕರು, ಕಾರ್ಯಕರ್ತರು ನಿಮ್ಮನ್ನು ಕೈ ಬಿಡುತ್ತಿರುವ ಕಾರಣ ಬಿಜೆಪಿಯೊಂದಿಗೆ ಸೇರಿಕೊಂಡಿದ್ದಾರೆ. ಜನರ ಪ್ರೀತಿ,ವಿಶ್ವಾಸ ಉಳಿಸಿಕೊಂಡಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

19 mins ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

2 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

3 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

3 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

3 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

3 hours ago