ನಂಜನಗೂಡು: ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣ್ ಅವರ 64ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿತ್ತು.
ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಮೇಳ, ಕಣ್ಣಿನ ತಪಾಸಣೆ ಶಿಬಿರ, ಆರೋಗ್ಯ ಶಿಬಿರ, ರಕ್ತದಾನ ಶಿಬಿರದಲ್ಲಿ ಹಲವರು ಭಾಗಿಯಾಗಿ ಇದರ ಸದುಪಯೋಗಪಡಿಸಿಕೊಂಡರು.
ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಭಾಗಿಯಾಗಿದ್ದರು. 90ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಿ ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ನೀಡಿದರು.
ಜೊತೆಗೆ ಅಪೋಲೋ ಆಸ್ಪತ್ರೆ, ನಾರಾಯಣ ಹೃದಯಾಲಯ, ಲಯನ್ಸ್ ಸಂಸ್ಥೆಯಿಂದ ಕಣ್ಣಿನ ತಪಾಸಣೆ, ರಕ್ತದಾನ ಶಿಬಿರ, ಇಸಿಜಿ ವ್ಯವಸ್ಥೆಯನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಕ್ಕಪಕ್ಕದ ಗ್ರಾಮಸ್ಥರು, ನಿರುದ್ಯೋಗ ಯುವಕ-ಯುವತಿಯರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಇದರ ಸದುಪಯೋಗ ಪಡಿಸಿಕೊಂಡರು.





