ಮೈಸೂರು: ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯಾಧಿಕಾರಿಗಳು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಕಂ ಮೆರಿಟ್ ಆಧಾರಿತ) ನೇರ ಸಂದರ್ಶನದ ಮೂಲಕ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ನೇರ ಸಂದರ್ಶನವನ್ನು ನಜರ್‌ಬಾದ್‌ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಜುಲೈ 4 ರಂದು ಬೆಳಿಗ್ಗೆ 10.30 ಗಂಟೆಗೆ ನಿಗಧಿಪಡಿಸಲಾಗಿದ್ದು, ಆಸಕ್ತರು ಅನ್ವಯವಾಗುವ ತಮ್ಮ ಎಲ್ಲಾ ದೃಢೀಕೃತ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಮತ್ತು ಅತ್ತಿಗೋಡು, ಕೆ ಆರ್ ನಗರ ತಾಲೂಕಿನ ಮುಂಡೂರು ಹಾಗೂ ಅಡಗೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ (ಹೌಸ್‌ಮನ್ ಶಿಪ್) ನಲ್ಲಿ ಉತ್ತೀರ್ಣರಾಗಿರಬೇಕು.
ನಂಜನಗೂಡು, ಹುಣಸೂರು ಹಾಗೂ ಎಚ್.ಡಿ.ಕೋಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ಮತ್ತು ಸ್ನಾತಕೋತ್ತರ ಪದವಿ (ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಮತ್ತು ಮಕ್ಕಳ ತಜ್ಞರು) ಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ದೂ.ಸಂ: 0821-2529205 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಮಟ್ಟದ ಗುತ್ತಿಗೆ ಆಧಾರದ ವೈದ್ಯರ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.