ಮೈಸೂರು

Jobs allerts: ವೈದ್ಯಾಧಿಕಾರಿಗಳ ನೇಮಕಾತಿಗೆ ನೇರ ಸಂದರ್ಶನ

ಮೈಸೂರು: ಜಿಲ್ಲೆಯಲ್ಲಿನ ಸಾರ್ವಜನಿಕ ಆಸ್ಪತ್ರೆ/ಸಮುದಾಯ ಆರೋಗ್ಯ ಕೇಂದ್ರ/ಪ್ರಾಥಮಿಕ ಆರೋಗ್ಯ ಕೆಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯಾಧಿಕಾರಿಗಳು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಕಂ ಮೆರಿಟ್ ಆಧಾರಿತ) ನೇರ ಸಂದರ್ಶನದ ಮೂಲಕ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ನೇರ ಸಂದರ್ಶನವನ್ನು ನಜರ್‌ಬಾದ್‌ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಜುಲೈ 4 ರಂದು ಬೆಳಿಗ್ಗೆ 10.30 ಗಂಟೆಗೆ ನಿಗಧಿಪಡಿಸಲಾಗಿದ್ದು, ಆಸಕ್ತರು ಅನ್ವಯವಾಗುವ ತಮ್ಮ ಎಲ್ಲಾ ದೃಢೀಕೃತ ದಾಖಲಾತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಮತ್ತು ಅತ್ತಿಗೋಡು, ಕೆ ಆರ್ ನಗರ ತಾಲೂಕಿನ ಮುಂಡೂರು ಹಾಗೂ ಅಡಗೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ (ಹೌಸ್‌ಮನ್ ಶಿಪ್) ನಲ್ಲಿ ಉತ್ತೀರ್ಣರಾಗಿರಬೇಕು.

ನಂಜನಗೂಡು, ಹುಣಸೂರು ಹಾಗೂ ಎಚ್.ಡಿ.ಕೋಟೆ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ಮತ್ತು ಸ್ನಾತಕೋತ್ತರ ಪದವಿ (ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಮತ್ತು ಮಕ್ಕಳ ತಜ್ಞರು) ಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ದೂ.ಸಂ: 0821-2529205 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಮಟ್ಟದ ಗುತ್ತಿಗೆ ಆಧಾರದ ವೈದ್ಯರ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

6 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

6 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

6 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

6 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

7 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

8 hours ago