ಮೈಸೂರು: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ಮುಟ್ಟಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ರೋಜ಼್‌ಗಾರ್ ಯೋಜನೆಯ ಅಡಿಯಲ್ಲಿ ಯುವ ಶಕ್ತಿಯೊಂದಿಗೆ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಬಲಪಡಿಸುವ ಗುರಿಯೊಂದಿಗೆ, ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51,000ಕ್ಕೂ ಅಧಿಕ ಯುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮಾಡುವ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿಗೆ ಪೂರಕೆವಾಗಿ ಯುವಕರಿಗೆ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಉದ್ಯೋಗ ಪಡೆದ ಅಭ್ಯರ್ಥಿಗಳಿಗೆ ಶುಭಹಾರೈಸಿದರು. ಶಾಸಕರಾದ ಟಿ.ಎಸ್.ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…