ಮೈಸೂರು

ವಿಕಸಿತ ಭಾರತಕ್ಕೆ ಕೈಜೋಡಿಸಿ: ಸಂಸದ ಯದುವೀರ್‌

ಮೈಸೂರು: ಕಳೆದ 10 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೆ ಅಭಿವೃದ್ದಿ ಗುರಿಯನ್ನು ಮುಟ್ಟಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ರೋಜ಼್‌ಗಾರ್ ಯೋಜನೆಯ ಅಡಿಯಲ್ಲಿ ಯುವ ಶಕ್ತಿಯೊಂದಿಗೆ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಬಲಪಡಿಸುವ ಗುರಿಯೊಂದಿಗೆ, ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51,000ಕ್ಕೂ ಅಧಿಕ ಯುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಮಾಡುವ‌ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿಗೆ ಪೂರಕೆವಾಗಿ ಯುವಕರಿಗೆ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಉದ್ಯೋಗ ಪಡೆದ ಅಭ್ಯರ್ಥಿಗಳಿಗೆ ಶುಭಹಾರೈಸಿದರು. ಶಾಸಕರಾದ ‌ಟಿ.ಎಸ್.ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್  ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

51 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

53 mins ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

55 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

58 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

1 hour ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago