Mysore
17
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ಯುದುವೀರ್‌ ಗೆಲ್ಲಿಸುವ ಮೂಲಕ ಮೋದಿ ಕೈ ಬಲಪಡಿಸೋಣ: ಸಂಸದೆ ಸುಮಲತಾ

ಮೈಸೂರು: ಮುಂದಿನ 25 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭಾರತವನ್ನು ಪ್ರಪಂಚದಲ್ಲಿಯೇ ನಂಬರ್‌.1 ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದು, ಇವರಿಗೆ ಜೊತೆಯಾಗಿ ಕೈ ಜೋಡಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರನ್ನು ಗೆಲ್ಲಿಸಿ ಪಾರ್ಲಿಮೆಂಟಿಗೆ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್‌ ಮನವಿ ಮಾಡಿದ್ದಾರೆ.

ಮೈಸೂರಿನ ಕೆ.ಆರ್‌ ಕ್ಷೇತ್ರದಲ್ಲಿ ನಡೆದ ಬಿಜೆಪಿ ನಾರಿ ಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರು ಸ್ವಾತಂತ್ರ ಪೂರ್ವದಲ್ಲಿಯೇ ಅಭಿವೃದ್ಧಿ ಹೊಂದಿದ ನಗರವಾಗಿದೆ. ಈ ಆಧುನಿಕ ನಗರ ನಿರ್ಮಾಣಕ್ಕೆ ಮೈಸೂರು ಮಹಾರಾಜರ ಕೊಡುಗೆ ಬಹಳಷ್ಟಿದೆ. ಇಂತಹ ಮಹಾರಾಜರು ನಿಮ್ಮ ಸೇವೆ ಮಾಡಲು ಮುಂದೆ ಬಂದಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಮೈಸೂರು ಮಹಾರಾಜರ ಋಣ ತೀರಿಸಲು ಇರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಬೆಂಗಳೂರಿನ ಜನರ ಮೇಲೆ ಮಹಾರಾಜರ ಋಣ ಇದೆ. ಈ ಬಾರಿ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸುವ ಮೂಲಕ ಮಹಾರಾಜರನ್ನು ವಿರೋಧಿಸುವವರಿಗೆ ತಕ್ಕ ಉತ್ತರ ನೀಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್‌ ಅವರು ತಿಳಿಸಿದರು.

Tags:
error: Content is protected !!