ಮೈಸೂರು: ಮುಂದಿನ 25 ವರ್ಷಗಳ ಅವಧಿಯಲ್ಲಿ ಪ್ರಧಾನಿ ಮೋದಿ ಅವರು ಭಾರತವನ್ನು ಪ್ರಪಂಚದಲ್ಲಿಯೇ ನಂಬರ್.1 ಸ್ಥಾನಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದು, ಇವರಿಗೆ ಜೊತೆಯಾಗಿ ಕೈ ಜೋಡಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಗೆಲ್ಲಿಸಿ ಪಾರ್ಲಿಮೆಂಟಿಗೆ ಕಳುಹಿಸಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.
ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ ನಡೆದ ಬಿಜೆಪಿ ನಾರಿ ಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರು ಸ್ವಾತಂತ್ರ ಪೂರ್ವದಲ್ಲಿಯೇ ಅಭಿವೃದ್ಧಿ ಹೊಂದಿದ ನಗರವಾಗಿದೆ. ಈ ಆಧುನಿಕ ನಗರ ನಿರ್ಮಾಣಕ್ಕೆ ಮೈಸೂರು ಮಹಾರಾಜರ ಕೊಡುಗೆ ಬಹಳಷ್ಟಿದೆ. ಇಂತಹ ಮಹಾರಾಜರು ನಿಮ್ಮ ಸೇವೆ ಮಾಡಲು ಮುಂದೆ ಬಂದಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ ಮೈಸೂರು ಮಹಾರಾಜರ ಋಣ ತೀರಿಸಲು ಇರುವ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನುಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಬೆಂಗಳೂರಿನ ಜನರ ಮೇಲೆ ಮಹಾರಾಜರ ಋಣ ಇದೆ. ಈ ಬಾರಿ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸುವ ಮೂಲಕ ಮಹಾರಾಜರನ್ನು ವಿರೋಧಿಸುವವರಿಗೆ ತಕ್ಕ ಉತ್ತರ ನೀಡಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ತಿಳಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…