ಮೈಸೂರು

ಪತ್ರಿಕೋದ್ಯಮ : ವಿದ್ಯಾರ್ಹತೆ ಜೊತೆ ಕೌಶಲ ಮುಖ್ಯ

ಮೈಸೂರು: ಪತ್ರಿಕೋದ್ಯಮದ ದಾರಿ ಹಿಡಿಯುವ ವಿದ್ಯಾರ್ಥಿಗಳು ಅಧ್ಯಯನದ ಜೊತೆ ಜಾಗತಿಕ ವಿದ್ಯಮಾನಗಳ ಅರಿವು, ಕೌಶಲ್ಯಗಳನ್ನು ಅರಿಯಬೇಕಿದೆ  ಎಂದು ಪ್ರಜಾವಾಣಿಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ.ನರಸಿಂಹಮೂರ್ತಿ ಹೇಳಿದರು.

ಮಾನಸಗಂಗೋತ್ರಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ” ಡೆಸ್ಕ್ ವರ್ಕ್ ಮತ್ತು ವರದಿಗಾರಿಕೆ” ವಿಷಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ವರದಿಗಾರಿಕೆಗೆ ತೆರಳುವ ಮುನ್ನ ಅನ್ಲೈನ್ ವಿಷಯವಾದರೂ ಸರಿ, ಪುಸ್ತಕಗಳ ಮೂಲಕವಾದರೂ ಒಂದು ವಿಷಯದ ಪೂರ್ಣ ಮಾಹಿತಿಯನ್ನು ವರದಿಗಾರರು ತಿಳಿದಿರಬೇಕು ಎಂದು ಸಲಹೆ ನೀಡಿದರು.

ಡೆಸ್ಕ್ ವರ್ಕ್ ಮತ್ತು ವರದಿಗಾರರು ಒಂದೇ ಸಂಸ್ಥೆಯ ಎರಡು ಕಣ್ಣುಗಳಿದ್ದಂತೆ. ಪ್ರತಿಯೊಂದು ಸಂಸ್ಥೆಯಲ್ಲಿಯೂ ವರದಿಗಾರಿಕೆಯೂ ಇರುತ್ತದೆ ಹಾಗೇ ಸಂಪಾದಕೀಯ ತಂಡವು ಇರುತ್ತದೆ, ಎರಡು ಕೂಡ ವಿಭಿನ್ನವಾಗಿ ಕಾರ್ಯನಿರ್ವಹಿಸಿದರೂ, ವರದಿಗಾರನಿಗೆ ಸಂಪಾದಕನ ಕೆಲಸ ಹಾಗೂ ಸಂಪಾದಕನಿಗೆ ವರದಿಗಾರಿಕೆಯು ತಿಳಿದಿರಬೇಕು ಎಂದು ಅವರು ಹೇಳಿದರು.

ಒಬ್ಬ ಉತ್ತಮ ವರದಿಗಾರನಾದಾಗ ಮಾತ್ರ ಉತ್ತಮ ಸಂಪಾದಕನಾಗಲು ಸಾಧ್ಯ, ಹಾಗೆಯೇ ಉತ್ತಮ ಸಂಪಾದಕನಿಗೆ ವರದಿಗಾರನ ವಿಷಯ ಮತ್ತು ವಸ್ತುಪ್ರಜ್ಞೆ ತಿಳಿದಿರಬೇಕು. ಯಾವುದೇ ವಿಷಯದ ಬಗ್ಗೆ ಬರೆಯುವಾಗ ಅಥವಾ ವರದಿಗಾರಿಕೆ ಮಾಡುವಾಗ ವಿಷಯಗಳ ಕುರಿತು ಆಳವಾದ ಅಧ್ಯಯನ ಮಾಡಿದಾಗ ಮಾತ್ರ ಅದರ ಕುರಿತಾದ ಸಂಪೂರ್ಣ ಚಿತ್ರಣಗಳು ನಮಗೆ ಸಿಗುತ್ತದೆ ಎಂದು ಹೇಳಿದರು.

ತಮ್ಮ ವರದಿಗಾರಿಕೆಯ ಅನುಭವಗಳ ಬಿಚ್ಚಿಡುತ್ತ ಹಲವು ಮುಖ್ಯ ವರದಿಗಾರಿಕೆಗಳ ಕುರಿತು ವಿವರಿಸಿದರು. ಒಬ್ಬ ಪತ್ರಕರ್ತನಿಗೆ ಇರಬೇಕಾದಂತಹ ಗುಣಗಳು ಯಾವುದು? ಆತ ಹೇಗೆ ಒಂದು ವಿಷಯವನ್ನು ವರದಿಗಾರಿಕೆ ಮಾಡಬೇಕು? ಎಂಬುದನ್ನು ಸವಿಸ್ತಾರವಾಗಿ ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.

ಉಪನ್ಯಾಸದ ನಂತರ ವಿದ್ಯಾರ್ಥಿಗಳಲ್ಲಿದ್ದ ಹಲವು ಗೊಂದಲಗಳಿಗೆ ಸೂಕ್ತವಾದ ಉತ್ತರಗಳನ್ನು ನೀಡಿ ಸಂವಾದವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ. ಎನ್ ಮಮತ , ಅತಿಥಿ ಉಪನ್ಯಾಸಕ ಡಾ ಕುಮಾರಸ್ವಾಮಿ, ಸಂಶೋಧನಾ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

4 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

4 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

7 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

7 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

7 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

7 hours ago