ಮೈಸೂರು

ಸತ್ಯ ನಿಷ್ಠೆಯಿಂದ ಪಕ್ಷ, ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿರುವ ಪತ್ರಿಕೋದ್ಯಮ : ಪ್ರಭಾಕರ್‌ ಬೇಸರ

ಮೈಸೂರು: ಪತ್ರಿಕೋದ್ಯಮದ ಆದ್ಯತೆ ಸತ್ಯ ನಿಷ್ಠೆಯಿಂದ ಪಕ್ಷ ನಿಷ್ಠೆಗೆ ಜಾರಿ ಈಗ ವ್ಯಕ್ತಿ ನಿಷ್ಠತೆ ಕಡೆಗೆ ಜಾರುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌ ಬೇಸರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಮೈಸೂರು ವಿಶ್ವವಿದ್ಯಾಲಯದ ಸಹಭಾಗಿತ್ವದ “ಏನ್‌ ಸಮಾಚಾರ ಮೀಡಿಯಾ ಹಬ್ಬ” ಎರಡು ದಿನಗಳ ಕಾರ್ಯಾಗಾರದ ಸಮಾರೋಪ ಭಾಷಣದಲ್ಲಿ ಅವರು ಮಾತನಾಡಿದರು.

ಪಕ್ಷ ಹಾಗೂ ವ್ಯಕ್ತಿ ನಿಷ್ಠೆಗೆ ಜಾರುತ್ತಿರುವ ವೃತ್ತಿ ನೈತಿಕತೆ ಮತ್ತು ತಂತ್ರಜ್ಞಾನದ ಸವಾಲುಗಳನ್ನು ಜೀರ್ಣಿಸಿಕೊಂಡು ವೃತ್ತಿಪರತೆ ರೂಪಿಸಲು ಮಾಧ್ಯಮ ಅಕಾಡೆಮಿಯಿಂದ ಕಾರ್ಯಾಗಾರ ನಡೆಸಲಾಗುತ್ತಿದೆ ಎಂದು ಹೇಳಿದರು.

ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲಪ್ಪಾ, ಬೇರೆ ಏನಾದ್ರೂ ಮಾಡೋಣ ಅಂತಿದೀನಿ ಅಂತ ನನ್ನ ಸ್ನೇಹಿತರು ಹೇಳ್ತಾನೇ ಇರ್ತಾರೆ.
ನಿಜ, ಇವತ್ತು ನಾವು-ನೀವು ಅನುಭವಿಸುತ್ತಿರುವ ದಾವಂತದ, ಊಹಾ ಪತ್ರಿಕೋದ್ಯಮಕ್ಕೆ ಭವಿಷ್ಯ ಇಲ್ಲ. ಆದರೆ, ವೃತ್ತಿಪರ ಸತ್ಯ ನಿಷ್ಠ ಪತ್ರಿಕೋದ್ಯಮಕ್ಕೆ ಭವಿಷ್ಯ ಉಜ್ವಲವಾಗಿದೆ. ಸತ್ಯನಿಷ್ಠೆಯ ಪತ್ರಿಕೋದ್ಯಮಕ್ಕೆ ಸಂದರ್ಭ ಹದವಾಗಿದೆ ಎಂದರು.

ವಿದ್ಯಾರ್ಥಿಗಳು ಪತ್ರಿಕೋದ್ಯಮದ ಕೌಶಲ್ಯ, ತಂತ್ರಜ್ಞಾನ ಎಲ್ಲವನ್ನು ಕಲಿಯುವ ಜೊತೆಗೆ ಹೊಣೆಗಾರಿಕೆಯನ್ನೂ ಅರಿತುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ.

ಪತ್ರಿಕೋದ್ಯಮ ಹಿಂದೆ ಸೇವೆಯಾಗಿತ್ತು. ಇಂದು ಉದ್ಯಮವಾಗಿದೆ. ಹಿಂದೆ ವಸ್ತುನಿಷ್ಠತೆ ಪತ್ರಿಕೋದ್ಯಮದ ಜೀವ ಸೆಲೆ ಆಗಿತ್ತು. ಆದರೆ ಇಂದು ವ್ಯಕ್ತಿ ನಿಷ್ಠತೆ ಪಿಡುಗು ಆತಂಕಕಾರಿಯಾಗಿ ಬೆಳೆಯುತ್ತಿದೆ ಎಂದರು.

ಕಳೆದ ವಾರ ಕಲಬುರಗಿಯಲ್ಲಿ ಇದೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿಗಿಂತ ಮೈಸೂರಿನ ಮಾಧ್ಯಮ ಹಬ್ಬ ಹೆಚ್ಚು ಯಶಸ್ವಿಯಾಗಿದೆ. ಇದಕ್ಕೆ ವಿದ್ಯಾರ್ಥಿಗಳ ಪರಿಣಾಮಕಾರಿ ಪಾಲ್ಗೊಳ್ಳುವಿಕೆ ಪ್ರಮುಖ ಕಾರಣ ಎಂದರು.‌

ಆದ್ದರಿಂದ ಜನರಿಗೆ ಸರಿಯಾದ ಮಾಹಿತಿ ನೀಡುವ ನಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಇದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಮಾಧ್ಯಮ ರಂಗದಲ್ಲಿ ನಾವು ಅಪೇಕ್ಷಿಸುವ ಬದಲಾವಣೆ ನಿಮ್ಮಿಂದಲೇ ಪ್ರಾರಂಭವಾಗಲಿ.

ಸತ್ಯದ ಅನ್ವೇಷಣೆ ಹಾಗೂ ವಾಸ್ತವವನ್ನೇ ಜನರ ಮುಂದಿಡುವ ಸಂಕಲ್ಪವನ್ನು ನೀವು, ವಿದ್ಯಾರ್ಥಿಗಳು ಮಾಡಬೇಕು ಎಂದು ಕರೆ ನೀಡಿದರು.

ಎರಡು ದಿನಗಳ ಕಾರ್ಯಾಗಾರದಲ್ಲಿ ನಡೆದ ವಿವಿಧ ವಿಭಾಗಗಳ ಸ್ಫರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಕೆ.ವಿ.ಪ್ರಭಾಕರ್ ಅವರು ಪ್ರಶಸ್ತಿ ಮತ್ತು ಪ್ರಶಸ್ತಿಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

2 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

3 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

3 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

4 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

4 hours ago