ಮೈಸೂರು: ಪತ್ರಕರ್ತ, ಉಪನ್ಯಾಸಕ ಹಾಗೂ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್ ಮೊಸಳೆ ಅವರ ತಂದೆ, ನಿವೃತ್ತ ಶಿಕ್ಷಕ ಕೆ.ಎಂ ರಂಗೇಗೌಡ(85) ಅವರು ಗುರುವಾರ ಮಧ್ಯರಾತ್ರಿ ನಿಧನರಾದರು.
ವಯೋಸಹಜ ಕಾಯಿಲೆ ಬಳಲುತ್ತಿದ್ದ ಅವರು, ತಮ್ಮ ಮನೆಯಲ್ಲಿಯೆ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ ಮಂಗಳಾ, ಪುತ್ರರಾದ ಲೋಕೇಶ್ ಮೊಸಳೆ, ಎಂ.ಆರ್ ದಿನೇಶ್ ಅವರನ್ನು ಅಗಲಿದ್ದಾರೆ.
ಹಾಸನ ಜಿಲ್ಲೆಯ ಮೊಸಳೆ ಗ್ರಾಮದವರಾದ ಅವರು, ಹಾಸನ ತಮ್ಮ ಊರಿನಲ್ಲೇ ಶಿಕ್ಷಕ ವೃತ್ತಿಯನ್ನು ಪ್ರಾರಂಭಿಸಿ ನಂತರ ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಬಳಿಕ ಮೈಸೂರಿನಲ್ಲಿ ನಿವೃತ್ತಿರಾಗಿದ್ದರು.
ಮರಗಿಡಗಳ ಪ್ರೇಮಿಯಾಗಿದ್ದ ಅವರು, ತಾವು ಕಾರ್ತವ್ಯ ನಿರ್ವಹಿಸಿದ ಜಾಗಗಳೆಲ್ಲೆಲ್ಲಾ ಸಸಿಗಳನ್ನು ನೆಟ್ಟು ಪೋಷಿಸುತ್ತಿದ್ದರು.
ಮೃತರ ಅಂತ್ಯಕ್ರಿಯೆಯು ನಗರದ ಆದಿಚುಂಚನಗಿರಿ ರಸ್ತೆಯ ರುದ್ಯಭೂಮಿಯಲ್ಲಿ ಗುರುವಾರ ಮಧ್ಯಾಹ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…