Mysore
23
overcast clouds
Light
Dark

ಜೂ. 10 ರಿಂದ ಮೂರು ದಿನಗಳ ಕಾಲ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ

ಮೈಸೂರು: ಭಾರತೀಯ ಭಾಷಾ ಸಂಸ್ಥಾನದ ವತಿಯಿಂದ ಜೂನ್ 10 ರಿಂದ 12 ವರೆಗೆ ಮೂರು ದಿನಗಳ ಕಾಲ ಭಾರತದ ಶಾಸ್ತ್ರೀಯ ಭಾಷೆಗಳ ರಾಷ್ಟ್ರೀಯ ಸಮ್ಮೇಳನ (ಸಿಸಿಎಲ್‌ಐ-24) ವನ್ನು ಸಂಸ್ಥೆಯ ಪ್ರಿವ್ಯೂ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮ್ಮೇಳನದ ಉದ್ಘಾಟನಾ ಸಮಾರಂಭವು ಜೂನ್.10 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಗುರ್ಗಾಂವ್‌ನ ಅಮಿಟಿ ವಿಶ್ವವಿದ್ಯಾಲಯದ ಭಾಷಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಉದಯ ನಾರಾಯಣ ಸಿಂಗ್ ಉದ್ಘಾಟನಾ ಭಾಷಣವನ್ನು ನೆರವೇರಿಸಲಿದ್ದಾರೆ. ಭಾರತೀಯ ಭಾಷಾ ಸಂಸ್ಥಾನದ ನಿರ್ದೇಶಕರಾದ ಪ್ರೊ.ಶೈಲೇಂದ್ರ ಮೋಹನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಭಾರತೀಯ ಭಾಷಾ ಸಂಸ್ಥಾನದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.