Mysore
25
clear sky

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಕೊಡವ ಸಂಪ್ರದಾಯದಂತೆ ನೆರವೇರಿದ ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ಅಂತ್ಯಸಂಸ್ಕಾರ

K.B. Ganapathy

ಮೈಸೂರು: ಹೃದಯಾಘಾತದಿಂದ ನಿಧನರಾಗಿದ್ದ ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ಅವರ ಅಂತ್ಯಸಂಸ್ಕಾರ ಕೊಡವ ಸಂಪ್ರದಾಯದಂತೆ ನೆರವೇರಿತು.

ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ ಅವರು ಮೂಲತಃ ಕೊಡಗಿನವರು. ತಮ್ಮದೇ ಅಂಕಣದ ಮೂಲಕ ಗಮನ ಸೆಳೆದಿದ್ದ ಗಣಪತಿ ಅವರು, ಸದಾ ಸುದ್ದಿ ಮನೆಯಲ್ಲಿ ಕ್ರೀಯಾಶೀಲವಾಗಿದ್ದವರು.

ಇಂದು ಮಧ್ಯಾಹ್ನ 3 ಗಂಟೆಯವರೆಗೆ ಕೆ.ಬಿ.ಗಣಪತಿ ಅವರ ಮೈಸೂರಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಂತರ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸ್ಮಶಾನದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಕೊಡವ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

Tags:
error: Content is protected !!