ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬಂಧಿಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕೊಡುಗು ಜಿಲ್ಲೆಯ ಮಕ್ಕಂದೂರಿನ ರಾಜರಾಜೇಶ್ವರಿ ನಗರ ಎಂ.ವಿ.ಮಹಮ್ಮದ್ ಮಿರ್ಶದ್ ಬಿನ್ ವಾಜಿದ್,(೨೩) ಹಾಗೂ ಕುಶಾಲನಗರ ತಾಲೂಕಿನ ಕಲಂದರ್ ಹಾರಂಗಿ ಯೋಜನೆ, ಯಡವನಾಡು ಅರಣ್ಯದ ಎಲ್ ಪದ್ಮನಾಭ ಬಿನ್ ಆರ್ ಲೋಕೇಶ್, (೨೩) ಬಂಧಿಸಿ ನ್ಯಾಯಾಲಕ್ಕೆ ಹಾಜರು ಪಡಿಸಿ, ಬಳಿಕ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ಪಟ್ಟಣದ ಚೀರಹಳ್ಳಿ ಮುಖ್ಯ ರಸ್ತೆಯ ಸಾಯಿ ಕನ್ವೆನ್ಸನ್ ಹಾಲ್ ಬಳಿ ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದಾಗ ಕೆ.ಆರ್.ನಗರ-ಮೈಸೂರು ಮುಖ್ಯ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದ ಬಳಿ ಇಬ್ಬರು ಆಸಾಮಿಗಳು ಬಿಳಿ ಬಣ್ಣದ ಮಾರುತಿ ೮೦೦ ಕಾರು ಸಂಖ್ಯೆ ಕೆಎ-೧೯ ಎಂ-೮೩೬೬ ರಲ್ಲಿ ಅಕ್ರಮವಾಗಿ ಒಣ ಗಾಂಜಾವನ್ನು ಇಟ್ಟುಕೊಂಡು ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಮಾರಾಟದ ಮಾಡಲಾಗುತ್ತದೆ ಎಂಬ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿ ೯೭೪ ಗ್ರಾಂ ತೂಕದ ಬೀಜ ಮಿಶ್ರಿತ ಒಣ ಗಾಂಜಾವನ್ನು ಅಕ್ರಮವಾಗಿ ಮಾರಾಟದ ಉದ್ದೇಶದಿಂದ ಸಾಗಾಣಿಕೆ ಮಾಡುತ್ತಿರುವುದು ಪತ್ತೆಯಾಗಿದ್ದು ದೊರೆತ ಗಾಂಜಾವನ್ನು ವಶಕ್ಕೆ ಪಡಿಸಿಕೊಂಡಿದ್ದೇವೆ ಎಂದು ಪಟ್ಟಣದ ಅಬಕಾರಿ ಇನ್ಸ್ ಪೆಕ್ಟರ್ ವೈ.ಎಸ್. ಲೋಕೇಶ್ ತಿಳಿಸಿದ್ದಾರೆ.
ಇದನ್ನೂ ಓದಿ:-ಮಿಷನ್ 40 ಫಾರ್ 90 ಡೇಸ್ : ಮಂಡ್ಯ ಜಿಲ್ಲೆಯಲ್ಲಿ SSLC ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಅಭಿಯಾನ
ಮಾರುತಿ ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮತ್ತು ಮಾರಾಟ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ವಿಭಾಗದ ಜಂಟಿ ಆಯುಕ್ತರಾದ ಬಸವರಾಜ ಹಡಪದ ಹಾಗೂ ಮೈಸೂರು ಜಿಲ್ಲೆ ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಡಾ.ಮಹದೇವಿ ಬಾಯಿ, ಹುಣಸೂರಿನ ಅಬಕಾರಿ ಉಪಅಧಿಕ್ಷಕರಾದ ಎಂ.ಡಿ.ಮೋಹನ್ ಕುಮಾರ್ ಇವರುಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು.
ಕಾರ್ಯಾಚರಣೆಯ ದಾಳಿ ವೇಳೆಯಲ್ಲಿ ಅಬಕಾರಿ ಸಬ್ ಇನ್ಸ್ ಪೆಕ್ಟರ್ ಸಿ.ವಿ.ರಾಘವೇಂದ್ರ, ಮುಖ್ಯ ಪೇದೆ ಕೆ.ಪಿ..ಶಿವಕುಮಾರ್, ಅಬಕಾರಿ ಪೇದೆ ಶಿವಪ್ಪಮಾಳಪ್ಪ ಭಾನುಸಿ, ಮತ್ತು ವಾಹನ ಚಾಲಕರಾದ ಮಹದೇವ.ಕೆ – ಗೃಹರಕ್ಷದಳ ಸಿಬ್ಬಂದಿಯಾದ ರವೀಶ.ಆರ್ ಉಪಸ್ಥಿತರಿದ್ದರು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…