ಮೈಸೂರು

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ ಅಡಗೂರು ಮಾರಗೌಡನಹಳ್ಳಿ ಮಹದೇವ್ (೫೮) ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿಯನ್ನು ಆಕಸ್ಮಿಕವಾಗಿ ತುಳಿದು ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ ಲಕ್ಷ್ಮಮ್ಮ ಹಾಗೂ ಮೂವರು ಪುತ್ರಿಯರು ಇದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಕೆಸ್ತೂರು ಕೊಪ್ಪಲು ಗ್ರಾಮದ ರಮೇಶ್ ಅವರ ಪುತ್ರ ಪುನೀತ್(೨೨) ಸಾವಿಗೀಡಾಗಿದ್ದಾರೆ. ತಮ್ಮ ಹಳೆಯ ಮನೆಯನ್ನು ದುರಸ್ಥಿ ಮಾಡಿಸುತ್ತಿದ್ದ ಇವರು, ನೀರಿನ ತೊಟ್ಟಿಯಿಂದ ನೀರು ಮೇಲೆತ್ತುವ ಮೋಟಾರ್ ಕೆಟ್ಟುಹೋಗಿದ್ದರಿಂದ ಅದನ್ನು ಸರಿಪಡಿಸಲು ನೀರಿನ ತೊಟ್ಟಿಗೆ ಇಳಿದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಮೃತ ಪುನೀತ್ ಕಳೆದ ತಿಂಗಳಷ್ಟೆ ಮದುವೆಯಾಗಿದ್ದು, ಪತಿ ಕಳೆದು ಕೊಂಡ ಪತ್ನಿ ಬೇಬಿ ಆಕ್ರಂದನ ಮುಗಿಲು‌ ಮುಟ್ಟಿತ್ತು.
ಸುದ್ದಿ ತಿಳಿಯುತ್ತಿದಂತೆ ಶಾಸಕ ಡಿ.ರವಿಶಂಕರ್ ಮಾರಗೌಡನಹಳ್ಳಿ ಗ್ರಾಮಕ್ಕೆ ತೆರಳಿ ಅವಘಡದ ಬಗ್ಗೆ ಪೂರ್ಣ ಮಾಹಿತಿ ಪಡೆದು ಸರ್ಕಾರದಿಂದ ಪರಿಹಾರ ಧನವನ್ನು ಕೊಡಿಸುವ ಭರವಸೆ ನೀಡಿದರು.
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

5 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

5 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

6 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

6 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

6 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

6 hours ago