Mysore
24
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಕೆ-ಸೆಟ್‌, ಯುಜಿಸಿ ನೆಟ್‌ ಪರೀಕ್ಷೆ: ಆ. 31 ಉಚಿತ ತರಬೇತಿ ಶಿಬಿರ ಉದ್ಘಾಟನೆ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್‌ ಮತ್ತು ಯುಜಿಸಿ ನೆಟ್‌ ಪರೀಕ್ಷೆಗೆ ಉಚಿತ ತರಬೇತಿ ನಡೆಸುವ 45 ದಿನಗಳ ಶಿಬಿರದ ಉದ್ಘಾಟನೆಯು ಆಗಸ್ಟ್‌ 31(ಶನಿವಾರ) ರಂದು ನಡೆಯಲಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ಕೆಎಸ್‌ಒಯು ಆವರಣದ ಕಾವೇರಿ ಸಭಾಂಗಣದಲ್ಲಿ ತರಬೇತಿ ಶಿಬಿರದ ಉದ್ಘಾಟನೆಯಾಗಲಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ ತ್ಯಾಗರಾಜು, ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್‌, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರೊ.ಜಿ.ಆರ್‌ ಅಂಗಡಿ ಅವರು ಭಾಗವಹಿಸಿ, ತರಬೇತಿ ಅಭ್ಯರ್ಥಿಗಳಿಗೆ ಶುಭಹಾರೈಸಿ ಪರೀಕ್ಷೆ ಎದುರಿಸುವ ಕುರಿತು ಭಾಷಣ ಮಾಡಲಿದ್ದಾರೆ.

ಕೆಎಸ್‌ಒಯು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ತರಬೇತಿ ಶಿಬಿರ ಉದ್ಘಾಟನೆಯ ಅಧ್ಯಕ್ಷತೆ ವಹಿಸಲಿದ್ದು, ಕಲಸಚಿವ ಪ್ರೊ.ಕೆ.ಬಿ ಪ್ರವೀಣ ಉಪಸ್ಥಿತರಿರುವವರು. ಆಸಕ್ತರು ಅಭ್ಯರ್ಥಿಗಳು ಈಗಲೂ ತರಬೇತಿಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 0821-2515944/9964760090 ನ್ನು ಸಂಪರ್ಕಿಸಬಹುದಾಗಿದೆ.

 

 

Tags:
error: Content is protected !!