ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ(ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಗೆ ಉಚಿತ ತರಬೇತಿ ನಡೆಸುವ 45 ದಿನಗಳ ಶಿಬಿರದ ಉದ್ಘಾಟನೆಯು ಆಗಸ್ಟ್ 31(ಶನಿವಾರ) ರಂದು ನಡೆಯಲಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಕೆಎಸ್‌ಒಯು ಆವರಣದ ಕಾವೇರಿ ಸಭಾಂಗಣದಲ್ಲಿ ತರಬೇತಿ ಶಿಬಿರದ ಉದ್ಘಾಟನೆಯಾಗಲಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸಿ.ಎಂ ತ್ಯಾಗರಾಜು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರೊ.ಜಿ.ಆರ್ ಅಂಗಡಿ ಅವರು ಭಾಗವಹಿಸಿ, ತರಬೇತಿ ಅಭ್ಯರ್ಥಿಗಳಿಗೆ ಶುಭಹಾರೈಸಿ ಪರೀಕ್ಷೆ ಎದುರಿಸುವ ಕುರಿತು ಭಾಷಣ ಮಾಡಲಿದ್ದಾರೆ.
ಕೆಎಸ್‌ಒಯು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ತರಬೇತಿ ಶಿಬಿರ ಉದ್ಘಾಟನೆಯ ಅಧ್ಯಕ್ಷತೆ ವಹಿಸಲಿದ್ದು, ಕಲಸಚಿವ ಪ್ರೊ.ಕೆ.ಬಿ ಪ್ರವೀಣ ಉಪಸ್ಥಿತರಿರುವವರು. ಆಸಕ್ತರು ಅಭ್ಯರ್ಥಿಗಳು ಈಗಲೂ ತರಬೇತಿಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 0821-2515944/9964760090 ನ್ನು ಸಂಪರ್ಕಿಸಬಹುದಾಗಿದೆ.
ಮಂಡ್ಯ: 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 66ವರ್ಷದ ಬಳಿಕ ಗಣಿನಾಡಿಗೆ ನುಡಿತೇರು…
ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್…
ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…