ಮೈಸೂರು

ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ.?

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸಿ, ಬೊಬ್ಬಿರಿದಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ತರಿಸಿದ್ದಾನೆ.

ಆದರೆ ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್‌ ಹಾಗೂ ಕಬಿನಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತಾ ಬರುತ್ತಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 99.20 ಅಡಿಗಳಾಗಿದೆ. ಜಲಾಶಯದಿಂದ 3841 ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದ್ದು, ಜಲಾಶಯಕ್ಕೆ ಕೇವಲ 81 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ.

ಇನ್ನು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 66 ಅಡಿಗಳಾಗಿದೆ. ಜಲಾಶಯಕ್ಕೆ 93 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 800 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಮುಂಗಾರು ಮಳೆ ತನ್ನ ಆರ್ಭಟ ಶುರುಮಾಡಿದರೆ ಈ ಜಲಾಶಯಗಳು 15 ದಿನಗಳ ಒಳಗೇ ಭರ್ತಿಯತ್ತ ಸಾಗಲಿವೆ. ಈ ಬಾರಿ ಉತ್ತಮ ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿಯೂ ಈ ಜಲಾಶಯಗಳು ಸಂಪೂರ್ಣ ಭರ್ತಿಯಾಗಲಿವೆ ಎಂದು ಹೇಳಲಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago