Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರೈತರ ಜೀವನಾಡಿ ಕಬಿನಿ ಜಲಾಶಯ ಬಹುತೇಕ ಭರ್ತಿ

ಎಚ್.ಡಿ ಕೋಟೆ :ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಲ್ಲದೆ ಜಲಾಶಯಗಳು ಭರ್ತಿಯತ್ತ ಸಾಗುತ್ತಿವೆ.

ಕೇರಳ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಎಚ್‌ ಡಿ ಕೋಟೆಯ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ನಿರಂತರವಾಗಿ ಹೆಚ್ಚಳವಾಗಿದೆ. ಈ ಕಬಿನಿಯೂ ಅನ್ನದಾತರ ಜೀವನಾಡಿ ಆಗಿದೆ. ಈ ಕಬಿನಿಯನ್ನೆ ನಂಬಿ ಎಷ್ಟೋ ರೈತರು ಜೀವನ ನಡೆಸುತ್ತಿದ್ದಾರೆ.  ಉತ್ತಮ ಮಳೆಯಿಂದ ಜಲಾಶಯವು ಭರ್ತಿಯಾಗುತ್ತಿದ್ದು ರೈತರಲ್ಲಿ ಸಂತೋಷ ಮನೆ ಮಾಡುತ್ತಿದೆ.

ಕಬಿನಿ ಜಲಾಶಯದ ಭರ್ತಿಗೆ ಕೇವಲ ೩ ಅಡಿ ಮಾತ್ರ ಬಾಕಿ ಇದೆ ಎನ್ನಲಾಗಿದೆ. ಗರಿಷ್ಟ ೨೨೮೪ ಅಡಿಗಳಷ್ಟು ನೀರಿನ ಸಂಗ್ರಹಣ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತವಾಗಿ ೨೨೮೧.೩೨ ಅಡಿಗಳಷ್ಟು ನೀರು ಸಂಗ್ರಹವಾಗಿದೆ.

Tags: