ಎಚ್.ಡಿ ಕೋಟೆ :ಮಹಾರಾಷ್ಟ್ರ, ಕೇರಳ ಹಾಗೂ ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ರಾಜ್ಯದ ಎಲ್ಲಾ ನದಿಗಳಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಲ್ಲದೆ ಜಲಾಶಯಗಳು ಭರ್ತಿಯತ್ತ ಸಾಗುತ್ತಿವೆ.
ಕೇರಳ ಮತ್ತು ಕರ್ನಾಟಕದ ಗಡಿಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಎಚ್ ಡಿ ಕೋಟೆಯ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ನಿರಂತರವಾಗಿ ಹೆಚ್ಚಳವಾಗಿದೆ. ಈ ಕಬಿನಿಯೂ ಅನ್ನದಾತರ ಜೀವನಾಡಿ ಆಗಿದೆ. ಈ ಕಬಿನಿಯನ್ನೆ ನಂಬಿ ಎಷ್ಟೋ ರೈತರು ಜೀವನ ನಡೆಸುತ್ತಿದ್ದಾರೆ. ಉತ್ತಮ ಮಳೆಯಿಂದ ಜಲಾಶಯವು ಭರ್ತಿಯಾಗುತ್ತಿದ್ದು ರೈತರಲ್ಲಿ ಸಂತೋಷ ಮನೆ ಮಾಡುತ್ತಿದೆ.
ಕಬಿನಿ ಜಲಾಶಯದ ಭರ್ತಿಗೆ ಕೇವಲ ೩ ಅಡಿ ಮಾತ್ರ ಬಾಕಿ ಇದೆ ಎನ್ನಲಾಗಿದೆ. ಗರಿಷ್ಟ ೨೨೮೪ ಅಡಿಗಳಷ್ಟು ನೀರಿನ ಸಂಗ್ರಹಣ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಪ್ರಸ್ತುತವಾಗಿ ೨೨೮೧.೩೨ ಅಡಿಗಳಷ್ಟು ನೀರು ಸಂಗ್ರಹವಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…