Mysore
22
broken clouds

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ತಗ್ಗಿದ ಮಳೆ: ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಇಳಿಕೆ

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕೊಂಚ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.

ಕೇರಳದ ವಯನಾಡು ಭಾಗದಲ್ಲಿ ಎರಡು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದೆ. ಪರಿಣಾಮ ರಾಜ್ಯದ ಕಬಿನಿ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದ್ದು, ನದಿ ಪಾತ್ರದ ಜನತೆ ಕೊಂಚ ನಿರಾಳರಾಗಿದ್ದಾರೆ.

ಜಲಾಶಯದ ಇಂದಿನ ಒಳಹರಿವು 15,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 10,000 ಕ್ಯೂಸೆಕ್ಸ್‌ಗೆ ಕಡಿಮೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 82 ಅಡಿಗಳಾಗಿದೆ.

ಜಲಾಶಯದಿಂದ ಕೇವಲ 10,000 ಕ್ಯೂಸೆಕ್ಸ್‌ನೀರನ್ನು ಕಪಿಲಾ ನದಿಗೆ ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ಉಂಟಾಗಿದ್ದ ಪ್ರವಾಹ ತಣ್ಣಗಾಗಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನತೆ ಕೊಂಚ ನಿರಾಳರಾಗಿದ್ದು, ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.

ಇನ್ನೆರಡು ದಿನಗಳಲ್ಲಿ ಹೊರಹರಿವು ಕಡಿಮೆಯಾದರೆ ಜನಜೀವನ ಯಥಾಸ್ಥಿತಿಯತ್ತ ಬರಲಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾದರೆ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

 

Tags:
error: Content is protected !!