ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕೊಂಚ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ.
ಕೇರಳದ ವಯನಾಡು ಭಾಗದಲ್ಲಿ ಎರಡು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದೆ. ಪರಿಣಾಮ ರಾಜ್ಯದ ಕಬಿನಿ ಜಲಾಶಯಕ್ಕೆ ಒಳಹರಿವು ಕಡಿಮೆಯಾಗಿದ್ದು, ನದಿ ಪಾತ್ರದ ಜನತೆ ಕೊಂಚ ನಿರಾಳರಾಗಿದ್ದಾರೆ.
ಜಲಾಶಯದ ಇಂದಿನ ಒಳಹರಿವು 15,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 10,000 ಕ್ಯೂಸೆಕ್ಸ್‌ಗೆ ಕಡಿಮೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 82 ಅಡಿಗಳಾಗಿದೆ.
ಜಲಾಶಯದಿಂದ ಕೇವಲ 10,000 ಕ್ಯೂಸೆಕ್ಸ್‌ನೀರನ್ನು ಕಪಿಲಾ ನದಿಗೆ ಬಿಡಲಾಗುತ್ತಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದಲ್ಲಿ ಉಂಟಾಗಿದ್ದ ಪ್ರವಾಹ ತಣ್ಣಗಾಗಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನತೆ ಕೊಂಚ ನಿರಾಳರಾಗಿದ್ದು, ಜಮೀನುಗಳಲ್ಲಿ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.
ಇನ್ನೆರಡು ದಿನಗಳಲ್ಲಿ ಹೊರಹರಿವು ಕಡಿಮೆಯಾದರೆ ಜನಜೀವನ ಯಥಾಸ್ಥಿತಿಯತ್ತ ಬರಲಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾದರೆ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…