ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಸಂಪೂರ್ಣ ಭರ್ತಿಯಾಗಿರುವ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಸಮರ್ಪಿಸಿದರು.
ಇಂದು ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಮೊದಲಿಗೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು. ಆ ಬಳಿಕ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ತುಂಬಿ ತುಳುಕುತ್ತಿರುವ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ವೆಂಕಟೇಶ್, ಎಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರು ಸಹ ಬಾಗಿನ ಸಮರ್ಪಿಸಿ, ರೈತರಿಗೆ ಒಳಿತಾಗುವಂತೆ ಪ್ರಾರ್ಥಿಸಿದರು.
ಕಬಿನಿಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದ ನಿಮಿತ್ತ ಇಂದು ಜಲಾಶಯಕ್ಕೆ ತಳಿರು ತೋರಣಗಳಿಂದ ಅಲಂಕಾರ ಮಾಡಿ ಸಿಂಗರಿಸಲಾಗಿತ್ತು. ಬಾಗಿನ ಸಲ್ಲಿಸುವ ಸ್ಥಳದಲ್ಲಿ ಸುಣ್ಣ-ಬಣ್ಣ ಬಳಿದು ಜಲಾಶಯಕ್ಕೆ ಹೆಚ್ಚಿನ ಅಲಂಕಾರ ಮಾಡಲಾಗಿತ್ತು.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…