ಮೈಸೂರು

ಕೇರಳದಲ್ಲಿ ಕಡಿಮೆಯಾದ ಮಳೆ: ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಇಳಿಕೆ

ಎಚ್‌ಡಿ ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ.

ಜಲಾಶಯದ ಇಂದಿನ ಒಳಹರಿವು 15,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವನ್ನು 9000 ಕ್ಯೂಸೆಕ್ಸ್‌ಗಳಿಗೆ ಇಳಿಕೆ ಮಾಡಲಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದ್ದು, ಜಲಾಶಯದ ಇಂದಿನ ನೀರಿನ ಮಟ್ಟ 82 ಅಡಿಗಳಾಗಿದೆ.

ಜಲಾಶಯದಿಂದ ಹೊರಹರಿವನ್ನು ಭಾರೀ ಪ್ರಮಾಣದಲ್ಲಿ ಕಡಿಮೆ ಮಾಡಲಾಗಿದ್ದು, ಕಪಿಲಾ ನದಿ ಪಾತ್ರದ ಜನರು ಕೊಂಚ ನಿರಾಳರಾಗಿದ್ದಾರೆ. ಇನ್ನು ಕಪಿಲಾ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಪ್ರವಾಹ ಪರಿಸ್ಥಿತಿಯಿಂದ ಹೊರಬರಲು ಇನ್ನೂ ಎರಡು ದಿನ ಬೇಕಾಗಿದ್ದು, ಜನಜೀವನ ಕೊಂಚ ಸಹಜಸ್ಥಿತಿಯತ್ತ ಮರಳುತ್ತಿದೆ.

ಕಪಿಲಾ ನದಿ ಆರ್ಭಟಕ್ಕೆ ತತ್ತರಿಸಿ ಹೋಗಿದ್ದ ಜನತೆ ಈಗ ಮಳೆಯ ಪ್ರಮಾಣ ಕಡಿಮೆಯಾದ್ದರಿಂದ ಕೊಂಚ ನಿರಾಳರಾಗಿದ್ದು, ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

48 mins ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

1 hour ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

2 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

2 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

2 hours ago