Mysore
22
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ.

ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕಬಿನಿ ಜಲಾಶಯದ ನೀರಿನ ಮಟ್ಟವೂ ಸಹ ಭಾರೀ ಕುಸಿತ ಕಂಡಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದ ನೀರಿನ ಮಟ್ಟ 53 ಅಡಿಗೆ ಕುಸಿದಿದೆ.

ಜಲಾಶಯದ ಒಳಹರಿವು ಕೂಡ ಕ್ಷೀಣಿಸುತ್ತಿದ್ದು, ಜಲಾಶಯಕ್ಕೆ ಕೇವಲ 600 ಕ್ಯೂಸೆಕ್ಸ್‌ ನೀರು ಮಾತ್ರ ಹರಿದು ಬರುತ್ತಿದೆ. ಜಲಾಶಯದಿಂದ 500 ಕ್ಯೂಸೆಕ್ಸ್‌ ನೀರನ್ನು ನದಿಗೆ ಬಿಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಸರಿಯಾಗಿ ಆಗದಿದ್ದರೆ ಕುಡಿಯುವ ನೀರಿಗೂ ಭಾರೀ ಅಭಾವ ಉಂಟಾಗುವ ಸಾಧ್ಯತೆ ಇದೆ.

Tags:
error: Content is protected !!