ಮೈಸೂರು: ಕಾಡಾನೆಗಳ ನಡುವೆ ಸಂಭವಿಸಿದ ಕಾಳಗದಲ್ಲಿ ಉದ್ದನೆಯ ದಂತವುಳ್ಳ ಜೂನಿಯರ್ ಬೋಗೇಶ್ವರ್ ಎಂದು ಕರೆಸಿಕೊಳ್ಳುತ್ತಿದ್ದ 24 ವರ್ಷದ ಆನೆಯೊಂದು ಮೃತಪಟ್ಟಿದ್ದು, ವನ್ಯಜೀವಿ ಪ್ರೇಮಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಕಬಿನಿ ಹಿನ್ನೀರು, ಡಿ.ಬಿ.ಕುಪ್ಪೆ, ಅಂತರಸಂತೆ ವಲಯದಲ್ಲಿದ್ದ ಉದ್ದನೆಯ ದಂತವುಳ್ಳ ಬೋಗೇಶ್ವರ ಆನೆಯನ್ನೇ (2022ರಲ್ಲಿ ಮೃತಪಟ್ಟಿರುವ) ಹೋಲುವಂತೆ ಉದ್ದನೆಯ ದಂತವುಳ್ಳ ಆನೆಯೊಂದು ಸಫಾರಿ ವಲಯದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಅದಕ್ಕೆ ಕೆಲ ವನ್ಯಜೀವಿ ಛಾಯಾಗ್ರಾಹಕರು ಜ್ಯೂನಿಯರ್ ಭೋಗೇಶ್ವರ ಎಂದು ಕರೆಯುತ್ತಿದ್ದರು.
ವಾರದಿಂದೆ ಜ್ಯೂನಿಯರ್ ಭೋಗೇಶ್ವರ ಆನೆಯೂ ಮೃತಪಟ್ಟಿದ್ದು, ಸಫಾರಿಗರು ಹಾಗೂ ಅರಣ್ಯ ಸಿಬ್ಬಂದಿಗೆ ನೋವುಂಟಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜ್ಯೂನಿಯರ್ ಭೋಗೇಶ್ವರ ಆನೆಯ ಸಾವಿನ ಸುದ್ದಿ ಚಿತ್ರದೊಂದಿಗೆ ವೈರಲ್ ಆಗಿದೆ.
ಡಿ.ಬಿ.ಕುಪ್ಪೆ ವನ್ಯಜೀವಿ ವಲಯದ ಕಬಿನಿ ಹಿನ್ನಿರಿನ ಪ್ರದೇಶ ಟವರ್‌ಕೊಲ್ಲಿ ಎಂಬಲ್ಲಿ ಮಾ.23ರಂದು ಗಂಡಾನೆಯೊಂದು ನಿತ್ರಾಣ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಸ್ತಿನಲ್ಲಿದ್ದ ಸಿಬ್ಬಂದಿ ಗಮನಿಸಿದ್ದರು. ಸಮೀಪಕ್ಕೆ ಹೋಗಿ ಪರಿಶೀಲಿಸಿದಾಗ ಕಾಡಾನೆಯೊಂದಿಗಿನ ಕಾಳಗದಿಂದ ಗಾಯಗೊಂಡಿರುವುದು ಪತ್ತೆಯಾಗಿತ್ತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗಂಡಾನೆಗೆ ಚಿಕಿತ್ಸೆ ಆರಂಭಿಸಲಾಗಿತ್ತು. ಆದರೆ, ಅದು ಕೊನೆಯುಸಿರು ಎಳೆದಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…