ಮೈಸೂರು

ಗಂಜೀಫಾ ಭಟ್ಟರಿಗೆ ʼಕಾಳಿದಾಸ ಸಮ್ಮಾನ್‌’ ಪ್ರಶಸ್ತಿ

ಮೈಸೂರು:  ಭಾರತೀಯ ಸಂಸ್ಕೃತಿ ಮತ್ತು ಕಲೆಯಲ್ಲಿ ಜೀವಮಾನ ಸಾಧನೆಗಾಗಿ ಮಧ್ಯಪ್ರದೇಶ ಸರ್ಕಾರದಿಂದ  ಪ್ರತಿ ವರ್ಷ ಕೊಡಮಾಡುವ ʼಕಾಳಿದಾಸ ಸಮ್ಮಾನ್‌ʼ ಪ್ರಶಸ್ತಿಗೆ ಈ ಬಾರಿ ಮೈಸೂರಿನ ಗಂಜೀಫಾ ರಘುಪತಿ ಭಟ್ಟ ಅವರು ಭಾಜನರಾಗಿದ್ದಾರೆ.

ಈ ಪ್ರಶಸ್ತಿ ಪ್ರಧಾನ ಸಮಾರಂಭವೂ ನವೆಂಬರ್‌ 12 ರಂದು ಉಜ್ಜಯಿನಿಯಲ್ಲಿ ನಡೆಯಲಿದೆ. ಪ್ರಶಸ್ತಿಯು  ಐದು ಲಕ್ಷ ರೂ. ನಗದು ಬಹುಮಾನ, ಶಾಲು ಹಾಗೂ ಶ್ರೀಫಲಕವನ್ನು ನೀಡಿ ಗೌರವಿಸಲಾಗುತ್ತದೆ.

ರಘುಪತಿ ಭಟ್ಟ ಅವರ ಹಿನ್ನೆಲೆ
ರಘುಪತಿ ಭಟ್ಟ ಅವರು 1957 ರಲ್ಲಿ ದಕ್ಷಿಣ ಕನ್ನಡದಲ್ಲಿ ಜನಿಸಿದರು. ಭಾರತೀಯ ಶಾಸ್ತ್ರೀಯ ಚಿತ್ರಕಲೆಯಲ್ಲಿ 50 ವರ್ಷದಿಂದ ತೊಡಗಿಸಿಕೊಂಡಿದ್ದಾರೆ. ಭಟ್ಟ ಅವರು ಮೈಸೂರಿನ ಲಕ್ಷಣ ಶಾಸ್ತ್ರದ ಅನ್ವಯ ಚಿತ್ರ ರಚಿಸುವಲ್ಲಿ ಪರಿಣಿತರಾಗಿದ್ದಾರೆ. ಅಲ್ಲದೇ, ಗಂಜೀಫಾ ಚಿತ್ರಕಲೆ ಹಾಗೂ ಕರಾವಳಿ ಭಾಗದ ಕಾವಿ ಕಲೆಯೂ ಅಳಿವಿನಂಚಿನಲ್ಲಿದ್ದಾಗ ಈ ಕಲೆಗಳನ್ನು ಪುನರುಜ್ಜೀವನಗೊಳಿಸುವ ಮೂಲಕ ಇನ್ನಷ್ಟು ಹೆಚ್ಚು ಪ್ರಸಿದ್ಧಿಯನ್ನು ಪಡೆದರು. ಭಟ್ಟರು ಕಾವಿ ಚಿತ್ರಕಲೆಯ ರಚನಾ ವಿಧಾನ ಕೃತಿಯನ್ನು ರಚಿಸಿದ್ದು, ಈ ಚಿತ್ರಕಲೆ ದೇಶ ವಿದೇಶಗಳಲ್ಲಿ ಪ್ರದರ್ಶನ ಕಂಡಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

2 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

2 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

3 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

3 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

4 hours ago