ಟಿ.ನರಸೀಪುರ: ಅಕ್ರಮ ಮದ್ಯ ಮಾರಾಟದ ವಿರುದ್ಧ ಟಿ.ನರಸೀಪುರ ತಾಲ್ಲೂಕಿನ ಕಾಳಿಹುಂಡಿ ಗ್ರಾಮಸ್ಥರು ತಿರುಗಿಬಿದ್ದಿದ್ದು, ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ತಾಲ್ಲೂಕು ಕೇಂದ್ರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟಿ.ನರಸೀಪುರ ತಾಲ್ಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟಿ.ನರಸೀಪುರ ತಾಲ್ಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ. ಇದರಿಂದ ಗ್ರಾಮಗಳಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾಗಿದೆ. ಯುವಕರು ಮದ್ಯದ ಚಟಕ್ಕೆ ಬಲಿಯಾಗುತ್ತಿದ್ದಾರೆ. ಅನೇಕ ಸಂಸಾರಗಳು ಬೀದಿಗೆ ಬೀಳುತ್ತಿವೆ. ಈ ಬಗ್ಗೆ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ತಾಲ್ಲೂಕು ಕೇಂದ್ರದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.





