Mysore
29
moderate rain

Social Media

ಶನಿವಾರ, 19 ಅಕ್ಟೋಬರ್ 2024
Light
Dark

ದೇಶವಿದೇಶಗಳಲ್ಲೂ ಅನುರಣಿಸಿದ ಕನ್ನಡದ ಕಂಪು

ಮೈಸೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗುರುವಾರ ಆಯೋಜಿಸಿದ್ದ ‘ಕೋಟಿ ಕಂಠ ಗಾಯನ’ ವಿಶ್ವದೆಲ್ಲೆಡೆ ಅನುರಣಿಸಿದೆ.

ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಡು, ನಾಡು, ನುಡಿ ಸಂರಕ್ಷಣಾ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಕನ್ನಡದ ಆಯ್ದ ಗೀತೆಗಳಿಗೆ ಧ್ವನಿಗೂಡಿಸಿದರು.

ಸರಕಾರ ಈ ಹಿಂದೆಯೇ ನೀಡಿರುವ ನಾಡಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿಧ್ಯಾಚೇತನ, ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಸೇರಿದಂತೆ ಒಟ್ಟು ಆರು ಹಾಡುಗಳನ್ನು ನಾಡಿನಾದ್ಯಂತ ಗಾಯಕರು ಹಾಡಿದರು.
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಕಂದಾಯ ಸಚಿವ ಅಶೋಕ್ ,ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಭಾಗವಹಿಸಿದ್ದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ.1ರಂದು 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು. ಅಂದು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಂಬಾವಿಲಾಸ ಅರಮನೆ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ನಗರದ ನಾನಾ ಭಾಗಗಳಿಂದ ಆಗಮಿಸಿದ್ದ ನಾನಾ ಕನ್ನಡ ಸಂಘಟನೆಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಕೋಟಿ ಕಂಠ ಗಾಯನಕ್ಕೆ ದನಿಗೂಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕರುಗಳಾದ ರಾಮದಾಸ್, ನಾಗೇಂದ್ರ, ಸಂಸದರಾದ ಪ್ರತಾಪ್ ಸಿಂಹ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಜಿಪಂ ಸಿಇಒ ಪೂರ್ಣಿಮಾ, ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹೇಮಂತ್ ಕುಮಾರ್, ಸಂಗೀತ ವಿವಿ ಕುಲಪತಿ ರವಿಕುಮಾರ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಅಧಿಕಾರಿಗಳು ಉಪಸ್ಥಿತರಿದ್ದರು.

ಧಾರವಾಡದ ಕಿಮ್ಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು, ಕನ್ನಡದ ಆಯ್ದ ಗೀತೆಗಳನ್ನು ಹಾಡಲಾಯಿತು.

ಪುನೀತ್ ಗೆ ಪ್ರಶಸ್ತಿ: ರಜನಿಕಾಂತ್, ಜೂ.ಎನ್ಟಿಆರ್ ಗೆ ಆಹ್ವಾನ
ಮೈಸೂರು: ನ.1ರಂದು 67ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ಸಿದ್ಧತೆ ನಡೆದಿದೆ.

ಪುನೀತ್ ರಾಜ್ ಕುಮಾರ್ ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನವಾಗಿದ್ದಾರೆ. ಈ ಕಾರ್ಯಕ್ರಮಕ್ಕೆ ರಜನಿಕಾಂತ್, ಜ್ಯೂನಿಯರ್ ಎನ್ಟಿಆರ್ಗೆ ಆಹ್ವಾನ ನೀಡಲಾಗಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್ ಕುಮಾರ್ ಕುಟುಂಬದವರು ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ