ಮೈಸೂರು: ನಗರದ ಕಂಸಾಳೆ ಕಲಾವಿದ ಕುಮಾರಸ್ವಾಮಿ(73) ಸೋಮವಾರ ನಿಧನರಾದರು.
ಇವರಿಗೆ ಪುತ್ರರಾದ ಕಂಸಾಳೆ ರವಿಚಂದ್ರ, ಮಹಾದೇವ, ಇಬ್ಬರು ಪುತ್ರಿಯರು ಇದ್ದಾರೆ. ಜ.26ರಂದು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಂಸಾಳೆ ಮಹಾದೇವಯ್ಯನವರ ಸುಪುತ್ರರಾದ ಕುಮಾರಸ್ವಾಮಿ ಅವರು 1951ರಲ್ಲಿ ಮೈಸೂರಿನ ಬಂಡಿಕೇರಿಯಲ್ಲಿ ಜನಿಸಿದ್ದರು. 7ನೇ ತರಗತಿ ವರೆಗೆ ವ್ಯಾಸಂಗ ಮಾಡಿರುವ ಇವರು, 9ನೇ ವರ್ಷಕ್ಕೆ ತಂದೆಯಿಂದ ಕಂಸಾಳೆ ಕಲೆ ಕಲಿತರು. ಈ ಮೂಲಕ ಬಾಲ್ಯದಿಂದಲೇ ತಂದೆ ಜತೆಗೆ ಜಾನಪದ ಕಲೆಯಾದ ಕಂಸಾಳೆಯನ್ನು ಮೈಗೂಡಿಸಿಕೊಂಡರು.
ದೆಹಲಿ, ಚೆನ್ನೈ, ಕೇರಳ, ಕೊಲ್ಕತ್ತ ಮಾತ್ರವಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ, ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಕಂಸಾಳೆ ಪ್ರದರ್ಶನ ನೀಡಿ ಗಮನ ಸೆಳೆದಿದ್ದರು. ಈ ವರೆಗೂ ಸಾವಿರಾರು ಮಕ್ಕಳಿಗೆ ಕಂಸಾಳೆ ಕಲೆಯನ್ನು ಹೇಳಿಕೊಟ್ಟಿದ್ದರು.
ನಟ ಶಿವರಾಜ್ ಕುಮಾರ್ ಅಭಿನಯದ ಜನುಮದ ಜೋಡಿ ಚಿತ್ರದ ಕೋಲುಮಂಡೆ ಹಾಡಿನ ಕಂಸಾಳೆ ಸಂಗೀತದ ನೃತ್ಯ ಸಂಯೋಜನೆ ಮಾಡಿ ಹೆಸರುವಾಸಿಯಾಗಿದ್ದರು. ಕರ್ನಾಟಕ ಜಾನಪದ ಅಕಾಡೆಮಿಯಿಂದ 2020ನೇ ಸಾಲಿನ ರಾಜ್ಯಮಟ್ಟ ಪ್ರಶಸ್ತಿಗೂ ಭಾಜನರಾಗಿದ್ದರು. ಜತೆಗೆ, ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…