ಮೈಸೂರು: ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಶುಂಠಿ ಶುದ್ಧೀಕರಣ ಕೇಂದ್ರಗಳು ಹೆಚ್ಚಾಗಿದ್ದು, ಶುಂಠಿ ಸ್ವಚ್ಚಗೊಳಿಸಲು ವಿವಿಧ ಬಗೆಯ ರಾಸಾಯನಿಕಗಳನ್ನು ಬಳಸುತ್ತಿರುವುದರಿಂದ ಪಕ್ಕದಲ್ಲೇ ಇರುವ ಕಬಿನಿ ನಾಲೆ ಕಲುಷಿತವಾಗುತ್ತಿದೆ.
ತಾಲ್ಲೂಕಿನಲ್ಲಿ ಐದಕ್ಕೂ ಹೆಚ್ಚು ಶುದ್ಧೀಕರಣ ಕೇಂದ್ರಗಳಿವೆ. ಶುಂಠಿ ಶುದ್ದಿಗಾಗಿ ಈ ಘಟಕಗಳು ಬಳಸುತ್ತಿರುವ ರಾಸಾಯನಿಕಗಳಿಂದ ಕೂಡಿದ ನೀರು ಕಬಿನಿ ನಾಲೆ ಸೇರಿ ನೀರು ಕಲುಷಿತಗೊಳ್ಳುತ್ತಿದ್ದು, ಇದರಿಂದ ಜಾನುವಾರುಗಳು ಹಾಗೂ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.
ಕೃಷಿಭೂಮಿಯನ್ನು ವಾಣಿಜ್ಯೇತರ ಕೆಲಸಗಳಿಗೆ ಬಳಿಸಿಕೊಳ್ಳುವ ಮುನ್ನ ಅನುಮತಿ ಪಡೆಯಬೇಕು. ಆದರೆ ಕಾನೂನು ಉಲ್ಲಂಘಿಸಿ ಶುದ್ಧೀಕರಣ ಘಟಕ ತೆರೆದಿರುವ ವ್ಯಕ್ತಿಗಳು ರಾಸಾಯನಿಕ ಬಳಸಿ ಶುಂಠಿ ಶುದ್ಧೀಕರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ.
ಈ ಕುರಿತು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಂದ ಪತ್ರ ನೀಡಿದರೂ ಹಾಗೂ ಕೌನ್ಸಿಲ್ ಸಭೆಯಲ್ಲಿ ಚರ್ಚೆ ನಡೆದಿದ್ದರೂ ಅಧಿಕಾರಿಗಳು ಭಾರೀ ನಿರ್ಲಕ್ಷ್ಯ ಮಾಡುತ್ತಿದ್ದಾರೆ.
ಪರಿಸರ ಇಲಾಖೆ, ಮಾಲಿನ್ಯ ಮಂಡಳಿ, ಪರಿಸರ ಅಭಿಯಂತರರು, ಅರಣ್ಯ ಇಲಾಖೆ, ತಾಲ್ಲೂಕು ಆಡಳಿತಾಧಿಕಾರಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದರೂ ಏನು ಪ್ರಯೋಜನವಾಗಿಲ್ಲ. ಇವರ ನಿರ್ಲಕ್ಷ್ಯದಿಂದ ಅಮಾಯಕರ ಜೀವಗಳು ಬಲಿಯಾಗುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…