ಮೈಸೂರು

ನಾಳೆ ಕರ್ನಾಟಕ ಬಂದ್‌ : ಏನಿರುತ್ತೆ, ಏನಿರಲ್ಲ ? ಇಲ್ಲಿದೆ ವಿವರ

ಮೈಸೂರು : ಮರಾಠಿಗರ ಪುಂಡಾಟದ ವಿರುದ್ಧ ರಣಕಹಳೆ ಮೊಳಗಿಸಿರುವ ಕನ್ನಡ ಪರ ಹೋರಾಟಗಾರರು, ನಾಳೆ (ಮಾ.22) ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿವೆ. ಹೀಗಾಗಿ ನಾಳೆ ಕರುನಾಡು ಸ್ತಬ್ದವಾಗಲಿದೆ.

ನಾಳಿನ(ಶನಿವಾರ) ಬಂದ್‌ಗೆ ಸಕಲ ಸಿದ್ದತೆಗಳು ನಡೆದಿದ್ದು, ಕೆಲವರು ಬಂದ್‌ಗೆ ಬಹಿರಂಗ ಬೆಂಬಲ ನೀಡಿದರೆ ಇನ್ನೂ ಕೆಲವರು ಬಾಹ್ಯ ಬೆಂಬಲ ನೀಡಿದ್ದಾರೆ. ಉಳಿದಂತೆ ಇತರರು ಬಂದ್‌ಗೆ ವಿರೋಧ ಸಹ ವ್ಯಕ್ತಪಡಿಸಿದ್ದಾರೆ.

ಬಂದ್‌ ಹಿನ್ನೆಲೆ ಬೆಂಗಳೂರು, ಮೈಸೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕನ್ನಡ ಪರ ಹೋರಾಟಗಾರರು ರಸ್ತೆಗಿಳಿದು ಮರಾಠಿಗರು ಹಾಗೂ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರ ಮೊಳಗಿಸಲಿದ್ದಾರೆ.

ಬಂದ್‌ ಇರುವುದರಿಂದ ನಾಳಿನ ಜನಜೀವನದಲ್ಲಿ ವ್ಯತ್ಯಯ ಉಂಟಾಗಲಿವೆ. ಆದಾಗ್ಯೂ ಶಾಲಾ-ಕಾಲೇಜುಗಳು ನಡೆಯಲಿದೆ. ಜೊತೆಗೆ ಸಾರಿಗೆ ಬಸ್‌ಗಳು ಸಹ ಎಂದಿನಂತೆ ಸಂಚರಿಸಲಿವೆ. ಯಾವುದೇ ಖಾಸಗಿ ಅಥವಾ ಸರ್ಕಾರಿ ಶಾಲಾ-ಕಾಲೇಜಿಗೆ ರಜೆ ಇರಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಖಾಸಗಿ ಶಾಲಾ ಆಡಳಿತ ಮಂಡಳಿವು ನೈತಿಕ ಬೆಂಬಲ ನೀಡಿವೆ. ಎಂದಿನಂತೆ ಶಾಲಾ-ಕಾಲೇಜುಗಳು ತೆರದಿರುತ್ತವೆ. ಪರೀಕ್ಷೆ ಸಹ ನಡೆಯುತ್ತವೆ.

ಏನಿರುತ್ತೆ?

  • ಕೆಎಸ್‌ಆರ್‌ಟಿಸಿ ಬಸ್
  • ಶಾಲಾ-ಕಾಲೇಜು
  • ಆಸ್ಪತ್ರೆ, ವೈದ್ಯಕೀಯ ಸೇವೆ
  • ಹೋಟೆಲ್‌ಗಳು
  • ಬಾರ್-ರೆಸ್ಟೋರೆಂಟ್

ಏನಿರಲ್ಲ?

  • ಮಾರುಕಟ್ಟೆ
  • ಓಲಾ-ಊಬರ್
  • ಆಟೋ ಸೇವೆ
  • ಸಿನಿಮಾ ಮಂದಿರ ಬೆಳಗಿನ ಶೋ

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

35 mins ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

1 hour ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

6 hours ago