ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭ ಆಗುತ್ತಿರುವ ಸಂದರ್ಭದಲ್ಲಿ ಉಂಟಾಗುವ ವಿದ್ಯುತ್ ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ, ಎಚ್ಚರವಹಿಸಲು ಕ್ರಮವಹಿಸಲಾಗಿದೆ.
ಸೆಸ್ಕ್ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭವಾಗಿ ಅಲ್ಲಲ್ಲಿ ಮಳೆಯಾಗುತ್ತಿದೆ. ಇಂತಹ ಸಂದರ್ಭಗಳಲ್ಲಿ ಅತಿಯಾದ ಗಾಳಿ ಮತ್ತು ಮಳೆಯಿಂದ ವಿದ್ಯುತ್ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಮಳೆಯಿಂದ ಸಂಭವಿಸಬಹುದಾದ ವಿದ್ಯುತ್ ಅವಘಡಗಳು ಹಾಗೂ ತೊಂದರೆಗಳನ್ನು ಎದುರಿಸಲು ಸೆಸ್ಕ್ ಸನ್ನದ್ಧವಾಗಿದೆ. ಈ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೆಸ್ಕ್ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್ ಬಂಡಿಸಿದ್ದೇಗೌಡ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯ ಸಂದರ್ಭದಲ್ಲಿ ಉಂಟಾಗುವ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಸೆಸ್ಕ್ ಸನ್ನದ್ಧವಾಗಿದ್ದರೆ. ಗ್ರಾಹಕರ ಸುರಕ್ಷತೆ ಬಗ್ಗೆಯೂ ಹೆಚ್ಚಿನ ನಿಗಾವಹಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಹಕರಿಗೆ ಅಗತ್ಯವಾದ ಸೇವೆ ನೀಡಲು ಕಾರ್ಯಪ್ರವೃತ್ತರಾಗಿದ್ದಾರೆ. ಅದರಂತೆ ಸಾರ್ವಜನಿಕರು ಅತಿಯಾದ ಗಾಳಿ ಮತ್ತು ಮಳೆಯ ಸಂದರ್ಭದಲ್ಲಿ ವಿದ್ಯುತ್ ಅಪಾಯಗಳು ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆವಹಿಸಲು ಕೋರಲಾಗಿದೆ.
ಅಲ್ಲದೇ ತಮ್ಮ ಸುತ್ತಮುಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ತಂತಿಗಳು ತುಂಡಾಗಿರುವುದು, ವಿದ್ಯುತ್ ಕಂಬಗಳು ಹಾನಿಯಾಗಿರುವುದು ಅಥವಾ ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಸಾರ್ವಜನಿಕರು ತುರ್ತಾಗಿ 24*7 ಸಹಾಯವಾಣಿ 1912 ಅಥವಾ ನಿಗಮದ ವಾಟ್ಸಾಪ್ ಸಂಖ್ಯೆ 9448991912 ಸಂಖ್ಯೆಗೆ ಫೋಟೋ ಸಹಿತವಾಗಿ ಮಾಹಿತಿ ನೀಡುವಂತೆ ಅಥವಾ ಸ್ಥಳೀಯ ಸೆಸ್ಕ್ ಅಧಿಕಾರಿಗಳು, ಸಿಬ್ಬಂದಿಗೆ ಮಾಹಿತಿ ನೀಡುವಂತೆ ಸೆಸ್ಕ್ ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…