ಮೈಸೂರು

ಕಾರ್ತಿಕ್ ಕೊಲೆ ಪ್ರಕರಣ : ಪರ-ವಿರೋಧ ಪೋಸ್ಟ್ ಮಾಡಿದ್ರೆ ಕ್ರಮ ; ಪೊಲೀಸ್ ಕಮಿಷನರ್ ಎಚ್ಚರಿಕೆ

‌ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಕದಗೆಡುವ ರೀತಿ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ.

ಮೇ 5ರಂದು ಮೈಸೂರು ಹೊರವಲಯದಲ್ಲಿ ರೌಡಿಶೀಟರ್ ಕಾರ್ತಿಕ್ ಕೊಲೆಯಾಯಿತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಇದಾದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ಪರ ವಿರೋಧ ಚರ್ಚೆಯ ಜೊತೆಗೆ ಓಪನ್ ಚಾಲೆಂಜ್ ಹಾಕಲಾಗುತ್ತಿದೆ. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವ ರೀತಿಯಲ್ಲಿ ಪೋಸ್ಟ್ ಗಳನ್ನು ಹಾಕಿದ್ 15ಕ್ಕೂ ಹೆಚ್ಚು ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಕಮಿಷನರ ತಿಳಿಸಿದರು.

ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ರೀತಿ ಪೋಸ್ಟ್ ಹಾಕಿದರೆ ಕಾನೂನು ಕ್ರಮ ಜರುಗಿಸುತ್ತೇವೆ. ಇದಕ್ಕಾಗಿಯೇ 52 ಮಂದಿ ಪೊಲೀಸರನ್ನು ಒಳಗೊಂಡ ಸೋಷಿಯಲ್ ಮೀಡಿಯಾ ಮಾನಿಟರ್ ತಂಡವನ್ನು ನಿಯೋಜಿಸಲಾಗಿದೆ.
ಈ ತಂಡ ದಿನವೂ ಮಾನಿಟರ್ ಮಾಡುತ್ತಿದೆ. ಎಲ್ಲಾ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸಮಾಜ ವಿರೋಧಿ ಪೋಸ್ಟ್ ಹಾಕುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇತ್ತೀಚೆಗೆ ರೌಡಿ ಪೆರೇಡ್ ನಡೆಸಲಾಗಿದೆ. 15 ದಿನಕ್ಕೊಮ್ಮೆ ರೌಡಿಗಳ ಪೆರೇಡ್ ನಡೆಸಲಾಗುತ್ತಿದೆ. ರೌಡಿಶೀಟರ್ ಗಳ ಮೇಲೂ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಅವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

29 seconds ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

8 mins ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

15 mins ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

41 mins ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

57 mins ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

59 mins ago