ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಒಂದು ತಿಂಗಳಿನಿಂದ ನಡೆಯುತ್ತಿರುವ ಕೆಎಎಸ್ ತರಬೇತಿಯು ಡಿ.23ರಂದು ಮುಕ್ತಯಗೊಳ್ಳಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ಈ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಮತ್ತು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಕೆ ರೂಪ ಭಾಗವಹಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸುವವರು. ತರಬೇತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ 239 ಅಭ್ಯರ್ಥಿಗಳು ಇದ್ದಾರೆ.
ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಪ್ರೊ.ಶರಣಪ್ಪ ಹಲಸೆ ಅಧ್ಯಕ್ಷತೆ ವಹಿಸುವವರು. ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಉಪಸ್ಥಿತರಿರುವರು ಎಂದು ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.