ಮೈಸೂರು: ಕೇರಳದ ವೈನಾಡಿನಲ್ಲಿ ಸಂಭವಿಸಿರುವ ಭೀಕರ ಗುಡ್ಡ ಕುಸಿತದಿಂದ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಲ್ಲಿ ಸಿಲುಕಿರುವ ಜನರ ರಕ್ಷಣೆ ಸಮರೋಪಾದಿಯಾಗಿ ಸಾಗುತ್ತಿದೆ.
ರಕ್ಷಿಸಿದ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕರ್ನಾಟಕ ಮತ್ತು ಕೇರಳ ಗಡಿ ಭಾಗದ (ಡಿ.ಬಿ ಕುಪ್ಪೆ) ಬಾವಲಿ ಚೆಕ್ ಪೋಸ್ಟ್ ನಲ್ಲಿಯೂ ಸಹ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಪಿ.ಸಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ತಜ್ಞ ವೈದ್ಯರ ತಂಡವನ್ನು ನೇಮಿಸಲಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಭೇಟಿ ನೀಡಿ, ಎಲ್ಲಾ ರೀತಿಯ ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧಪಡಿಸಿಕೊಳ್ಳುವುದಲ್ಲದೇ ಯಾವುದೇ ಕುಂದುಕೊರತೆ ಇಲ್ಲದಂತೆ ಕರ್ತವ್ಯ ನಿರ್ವಹಿಸಿಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನು ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ತಹಶೀಲ್ದಾರ್ ಶ್ರೀನಿವಾಸ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ ರವಿಕುಮಾರ್, ಡಾ ಶ್ರೀನಿವಾಸ್, ಡಾ. ನಾಗೇಶ್ ರಾವ್, ಡಾ ಶೇಷಾದ್ರಿ, ಹಿರಿಯ ಔಷಧ ವಿತರಣಾಧಿಕಾರಿ ಉಮೇಶ್ ತಂಡವನ್ನೂ ಕೇರಳ ವೈನಾಡುಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ತಿಳಿಸಿದರು.
ಗಡಿಭಾಗದ ದೊಡ್ಡ ಬೈರನಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ತುರ್ತು ವಾಹನವನ್ನು ನಿಯೋಜನೆ ಮಾಡಿಕೊಂಡಿದ್ದು ಜೊತೆಗೆ ಎಚ್ .ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಐದು ತುರ್ತು ವಾಹನ ಮತ್ತು 10 ಬೆಡ್ ಗಳನ್ನೂ ಸಿದ್ದಪಡಿಸಿಕೊಂಡಿದ್ದೇವೆ. ಮುಂಜಾಗ್ರತೆ ಕ್ರಮವಾಗಿ ಅಗತ್ಯ ಔಷಧಿಗಳನ್ನು ಸಹ ಇಟ್ಟುಕೊಳಲಾಗಿದೆ ಎಂದು ತಿಳಿಸಿದರು.
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…