ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ.
ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಇಳಿಕೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 5000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 2000 ಕ್ಯೂಸೆಕ್ಸ್‌ಗಳಿಗೆ ಇಳಿಕೆಯಾಗಿದೆ.
ಕಳೆದ ಎರಡು ದಿನಗಳಿಂದ ಬಿಸಿಲು ಇರುವುದರಿಂದ ನದಿ ಪಾತ್ರದ ಜನತೆ ಕೊಂಚ ನಿರಾಳರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೆರಡು ದಿನದಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ಸ್ಥಿತಿ ಸಹಜ ಸ್ಥಿತಿಯತ್ತ ಮರಳಲಿದೆ.
ಮಳೆ ಕಡಿಮೆಯಾಗಿ ಕಬಿನಿ ಜಲಾಶಯದ ಹೊರಹರಿವಿನಲ್ಲಿ ಭಾರೀ ಇಳಿಕೆಯಾದ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರ ಸ್ಥಿತಿ ಇನ್ನೆರಡು ದಿನದಲ್ಲಿ ಸಹಜ ಸ್ಥಿತಿಯತ್ತ ಮರಳಲಿದ್ದು, ರೈತರು ಕೂಡ ಭಾರೀ ಸಂತಸದಲ್ಲಿದ್ದಾರೆ.
ಆದರೆ ಮತ್ತೆ ಇನ್ನೆರಡು ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮಳೆ ಜಾಸ್ತಿ ಆದರೆ ಮತ್ತೆ ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಲಿದೆ. ಒಳಹರಿವಿ ಹೆಚ್ಚಾದಂತೆ ಹೊರಹರಿವನ್ನು ಹೆಚ್ಚಳ ಮಾಡಲಾಗುತ್ತದೆ ಎನ್ನಲಾಗಿದೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…