ಎಚ್.ಡಿ.ಕೋಟೆ: ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ನೆರೆಯ ಕೇರಳದಲ್ಲಿ ನಿಫಾ ವೈರಸ್‌ಗೆ ಮೊದಲ ಬಲಿಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ಮೈಸೂರು, ಕೊಡಗು ಹಾಗೂ ಚಾಮರಾಜನಗರದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.
ಇನ್ನೂ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಬರುವ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಬಾವಲಿ ಚೆಕ್‌ಪೋಸ್ಟ್‌ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಮೊಕ್ಕಾಂ ಹೂಡಿದ್ದು, ಕೇರಳದಿಂದ ಬರುವ ಪ್ರತೀ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ.
ಕರ್ನಾಟಕದಿಂದ ತರಕಾರಿ ತೆಗೆದುಕೊಂಡು ಕೇರಳಕ್ಕೆ ಅಪಾರ ವಾಹನಗಳು ಹೋಗುತ್ತಿದ್ದು, ಅಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಬಾವಲಿ ಚೆಕ್‌ಪೋಸ್ಟ್‌ಗೆ ಎಚ್.ಡಿ.ಕೋಟೆ ಆರೋಗ್ಯಾಧಿಕಾರಿ ಭೇಟಿ ನೀಡಿದ್ದು, ಎಲ್ಲರೂ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಿದ್ದಾರೆ.