ಮೈಸೂರು

ಎಣ್ಣೆ ಹೊಡೆಯೋಕೆ ರಾಜ್ಯಕ್ಕೆ ಲಗ್ಗೆ ಇಡುವ ಕೇರಳಿಗರು: ಬೇಸತ್ತ ರಾಜ್ಯದ ಹಾಡಿ ಜನತೆ

ಮೈಸೂರು: ಕೇರಳ ರಾಜ್ಯದಲ್ಲಿ ಮದ್ಯ ನಿಷೇಧವಾಗಿರುವ ಪರಿಣಾಮ ಕೇರಳಿಗರ ಕಾಟಕ್ಕೆ ರಾಜ್ಯದ ಹಾಡಿ ಜನರು ಬೇಸತ್ತು ಹೋಗಿದ್ದಾರೆ.

ಮದ್ಯದ ಅಮಲಿನಲ್ಲಿ ತೇಲುವ ಕೇರಳದವರಿಂದ ರಾಜ್ಯದ ಜನತೆ ಬೇಸತ್ತಿದ್ದು, ಕರ್ನಾಟಕಕ್ಕೆ ಎಣ್ಣೆ ಹೊಡೆಯಲೆಂದು ಬರುವ ಕೇರಳದವರಿಂದ ಸಂಕಷ್ಟ ಎದುರಾಗಿದೆ.

ಎಣ್ಣೆ ಹೊಡೆಯಲೆಂದೇ ರಾಜ್ಯಕ್ಕೆ ಕೇರಳಿಗರು ಲಗ್ಗೆ ಇಡುತ್ತಿದ್ದು, ರಾಜ್ಯದ ಗಡಿ ಭಾಗದಲ್ಲಿ ಪಾನಮತ್ತರಾಗಿ ತೂರಾಡುತ್ತಿದ್ದಾರೆ. ಮದ್ಯದ ನಶೆಯಲ್ಲಿ ಜನರು ಎಲ್ಲೆಂದರಲ್ಲಿ ಬಿದ್ದು ಒದ್ದಾಡುತ್ತಿದ್ದು, ಕಾಡು ಪ್ರಾಣಿಗಳು ಓಡಾಡುವ ಸ್ಥಳಗಳಲ್ಲೂ ಕೇರಳಿಗರು ನಶೆಯಲ್ಲಿ ತೇಲಾಡುತ್ತಿದ್ದಾರೆ.

ಕೇರಳಿಗರು ಬಾವಲಿ ಚೆಕ್‌ಪೋಸ್ಟ್ ಮುಖಾಂತರ ತಂಡೋಪತಂಡವಾಗಿ ಕರ್ನಾಟಕಕ್ಕೆ ಬಂದು ಮದ್ಯ ಸೇವನೆ ಮಾಡುತ್ತಿದ್ದು, ರಾಜ್ಯದ ಜನತೆಗೆ ಸಂಕಷ್ಟ ತಂದೊಡ್ಡಿದ್ದಾರೆ.

ದಟ್ಟ ಅರಣ್ಯ ನಾಗರಹೊಳೆಯ ಬಾವಲಿ ಚೆಕ್‌ಪೋಸ್ಟ್ ರಸ್ತೆಯಲ್ಲಿ ಸಂಜೆ 6 ರಿಂದ ಬೆಳಗ್ಗೆ 6ರವರಗೆ ಸಂಚಾರಕ್ಕೆ ನಿಷೇಧವಿದೆ. ಆದರೆ ಈ ಭಾಗದಲ್ಲಿ ರಾತ್ರಿ 10 ಗಂಟೆಯವರೆಗೂ ಮದ್ಯದಂಗಡಿಗಳು ಮಾತ್ರ ಎಂದಿನಂತೆ ತೆರೆಯಲಿವೆ. ಅಂಗಡಿಗಳಲ್ಲಿ ಮದ್ಯ ಸೇವಿಸಿ ಕೇರಳಿಗರು ಹಾಡಿಗಳಿಗೆ ನುಗ್ಗುತ್ತಿದ್ದು, ಹಾಡಿ ಹೆಣ್ಣು ಮಕ್ಕಳಿಗೆ ಭಾರೀ ಕಿರಿಕಿರಿ ಉಂಟು ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago