ಟಿ. ನರಸೀಪುರ : ಮಾಜಿ ಸಚಿವ ಸಿ.ಟಿ. ರವಿ ಮತ್ತು ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು ಎಂದು ದಸಂಸ ನಾಗವಾರ ಬಣದ ವತಿಯಿಂದ ಜಿಲ್ಲಾ ಸಂಚಾಲಕ ಎಸ್.ಆರ್. ಶಶಿಕಾಂತ ಸರ್ಕಾರವನ್ನು ಒತ್ತಾಯಿಸಿದರು.
ವೇಣುಗೋಪಾಲ್ ಕೊಲೆಯನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ, ವೈಯಕ್ತಿಕ ದ್ವೇಷದಿಂದ ಮತ್ತು ಸ್ವ ಪ್ರತಿಷ್ಠೆಯಿಂದ ಘಟನೆ ನಡೆದಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ವಿಚಾರವಾಗಿ ತಾಲೂಕಿಗೆ ಭೇಟಿ ನೀಡಿದ ಚಕ್ರವರ್ತಿ ಸೂಲಿಬೆಲೆ, ಸಿ.ಟಿ. ರವಿ, ಅಶ್ವತ್ ನಾರಾಯಣ, ಎನ್. ಮಹೇಶ ಅವರು ಈ ಕೊಲೆಯನ್ನು ಹಿಂದು ಕಾರ್ಯಕರ್ತನ ಕೊಲೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಯುವಕರಲ್ಲಿ ವಿಷ ಬೀಜ ಬಿತ್ತಿ ಮುಂಬರುವ ಚುನಾವಣೆಯಲ್ಲಿ ಧರ್ಮಾಧಾರಿತ ಬೆಂಬಲ ಪಡೆಯಲು ಮಾಡುತ್ತಿರುವ ವ್ಯವಸ್ಥಿತ ಪಿತೂರಿ ಎಂದು ಅವರು ಆರೋಪಿಸಿದರು.
ಹನುಮ ಜಯಂತಿಗೆ ಅನುಮತಿ ನೀಡಿದ್ದರಿಂದ ಈ ರೀತಿ ಸಮಸ್ಯೆ ಸೃಷ್ಟಿಯಾಗಿದೆ ನಮ್ಮ ತಾಲೂಕಿಗೆ ಹನುಮ ಜಯಂತಿಯ ಅವಶ್ಯಕತೆ ಇಲ್ಲ, ನೂರಾರು ವರ್ಷಗಳಿಂದ ಧಾರ್ಮಿಕ ಜಾತ್ರೆಗಳು ನಡೆಯುತ್ತಿರುವುದರಿಂದ ಹೊಸದಾಗಿ ಪ್ರಚಾರ ಮಾಡುವ ಅವಶ್ಯಕತೆ ಇಲ್ಲ, ಮುಂದಿನ ದಿನಗಳಲ್ಲಿ ಸರ್ಕಾರ ಹನುಮ ಜಯಂತಿಗೆ ಅನುಮತಿ ನೀಡಬಾರದು, ಬಿಜೆಪಿಯ ಯಾವುದೇ ನಾಯಕರಿಗೆ ತಾಲೂಕು ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ವೇಣುಗೋಪಾಲ್ ಕುಟುಂಬಕ್ಕೆ ಸರ್ಕಾರ ಆರ್ಥಿಕ ಸಹಕಾರ ನೀಡಬೇಕು ಎಂದು ಅವರು ಅಗ್ರಹಿಸಿದರು. ಶಿವಣ್ಣ, ಎಸ್. ನಂಜುಂಡಯ್ಯ, ಮಹದೇವಸ್ವಾಮಿ, ಮಂಜು, ನಾಗರಾಜು ಇದ್ದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…