ಮೈಸೂರು: ಕನ್ನಡ ನಾಡಿನ ಹೆಸರನ್ನು ಭೂಗೋಳದಲ್ಲಿ ಅವಿಸ್ಮರಣೀಯ ಮಾಡಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಹೇಳಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಣಿ ಚೆನ್ನಮ್ಮ ದೇಶದ ಜನರ ಮನಸು ಗೆದ್ದಂತಹ ಅಪ್ರತಿಮ ಹೋರಾಟಗಾರ್ತಿ. ಇತಿಹಾಸದಲ್ಲಿಯೇ ಮಹಿಳೆಯರಲ್ಲಿ ಮಂಚೂಣಿಯಲ್ಲಿರುವ ಹೆಸರು ಇವರದು. ಚೆನ್ನಮ್ಮ ಅವರು ಬ್ರಿಟಿಷರಿಗೆ ‘ನಿಮಗೇಕೆ ಕೊಡಬೇಕು ಕಪ್ಪ’ ಎಂಬ ಸವಾಲಿನ ಮಾತನ್ನಾಡಿ ನಮ್ಮ ನಾಡಿನ ಮಹಿಳೆ ಹಾಗೂ ಪುರುಷರಲ್ಲಿ ದೇಶ ಭಕ್ತಿಯನ್ನು ಹಚ್ಚಿ, 128 ವರ್ಷಗಳ ಮುಂಚೆಯೇ ಸ್ವಾತಂತ್ರ್ಯದ ಕಿಚ್ಚನ್ನು ಬೆಳಗಿಸಿದವರು ಎಂದು ಹೇಳಿದರು.
ಯಾವುದೇ ಒಂದು ಕೆಲಸ ಅಥವಾ ಸವಾಲನ್ನು ತೆಗೆದುಕೊಳ್ಳುವಾಗ ಹೆಣ್ಣು ಮಕ್ಕಳಿಗೆ ಸ್ಫೂರ್ತಿ ಕೊಡುವಂತಹ ಶಕ್ತಿ ಈಕೆಯದ್ದು. ಬುದ್ಧ, ಬಸವವಣ್ಣನವರ ಹಾದಿಯಲ್ಲಿ ನಮ್ಮ ದೇಶದ ಕೀರ್ತಿ ಪತಾಕೆಯನ್ನು ಆರಿಸುವಲ್ಲಿ ಇವರ ಕೊಡುಗೆ ಅಪಾರ ಎಂದು ತಿಳಿಸಿದರು.
ವಿಧಾನ ಪರಿಷತ್ತಿನ ಶಾಸಕ ಸಿ.ಎನ್ ಮಂಜೇಗೌಡ ಮಾತನಾಡಿ, ನಾಡಿನ ಇತಿಹಾಸ ತಿಳಿದುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ, ಬಸವಣ್ಣ ಇವರೆಲ್ಲರೂ ತಮ್ಮ ಪ್ರಾಣವನ್ನು ದೇಶದ ಏಳಿಗೆಗೆ, ಸ್ವಾತಂತ್ರ್ಯ ಹಾಗೂ ನಾಡಿನ ರಕ್ಷಣೆಗಾಗಿ ಬಲಿದಾನ ಮಾಡಿದಂತಹ ಮಹಾನ್ ವ್ಯಕ್ತಿಗಳು. ಇಂತಹ ಮಹಾನ್ ದಾರ್ಶನಿಕರನ್ನು ನಾವು ಸ್ಮರಿಸಿಕೊಳ್ಳುವ ಮೂಲಕ ಅವರ ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳಿದರು.
ಮಂಡ್ಯ ಜಿಲ್ಲೆಯ ಹಿರಿಯ ಸಾಹಿತಿ ಡಾ. ಪ್ರದೀಪ್ ಕುಮಾರ್ ಹೆಬ್ರಿ ಮಾತನಾಡಿ, ನಾವೆಷ್ಟು ನಮ್ಮ ದೇಶ, ಭಾಷೆಯ ಬಗ್ಗೆ ಪ್ರಾಮಾಣಿಕತೆ ಹಾಗೂ ಛಲವನ್ನು ಅಳವಡಿಸಿಕೊಂಡಿದ್ದೇವೆ ಎಂಬ ಚಿಂತೆಯು ಕಿತ್ತೂರು ರಾಣಿ ಚೆನ್ನಮ್ಮನ ವಿಜಯೋತ್ಸವದ ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕು. ಈ ನಾಡು ಅನ್ಯರ ಪಾಲಾಗದೆ ನಮಗೇ ಉಳಿಯಬೇಕೆಂಬ ದಿಟ್ಟ ಕನಸನ್ನು ಇಟ್ಟುಕೊಂಡು ಹೋರಾಟ ನಡೆಸಿದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಈಕೆಯ ಬದುಕು, ಹೋರಾಟ ಅನನ್ಯ. ಅವರ ದೇಶಪ್ರೇಮ ಎಲ್ಲರಿಗೂ ಅನುಕರಣೀಯವಾಗಿದ್ದು ಎಂದರು.
ನಾಡಿನ ಜನರನ್ನು ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಹುರಿದುಂಬಿಸಿ, ಕನ್ನಡಿಗರ ಪೌರುಷ, ಸಾಹಸ, ಸ್ವಾಭಿಮಾನವನ್ನು ಹೋರಾಟದ ಮೂಲಕ ತೋರ್ಪಡಿಸಿ, ಕನ್ನಡ ನಾಡಿನ ಉಳಿವಿಗೆ ಪ್ರಾಣವನ್ನೇ ಒತ್ತೆ ಇಟ್ಟ ಧೀರ ಮಹಿಳೆ. ಆಕೆಯ ಆಪ್ತರು ಮಾಡಿದ ಕುತಂತ್ರದ ಫಲವಾಗಿ ಮೋಸ, ವಂಚನೆಯಿoದ ಬ್ರಿಟಿಷರ ದಾಳಿಗೆ ಚೆನ್ನಮ್ಮ ಬಲಿಯಾದರು ಎಂದು ವಿಷಾದಿಸಿದರು.
200ನೇ ಜಯಂತಿಯ ಈ ಸಂಧರ್ಭದಲ್ಲಿ ನಮ್ಮ ಕೊನೆಯ ಉಸಿರು ಇರುವ ತನಕ ಈ ದೇಶಕ್ಕೆ ಯಾರೆಲ್ಲ ಮಹನೀಯರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೋ ಅವರನ್ನ ನಾವು ಸ್ಮರಿಸಬೇಕು. ಪ್ರತಿ ಮನೆಯಲ್ಲೂ ರಾಣಿ ಚೆನ್ನಮ್ಮನಂತಹ ಮಹಿಳೆಯರು ಹುಟ್ಟಿಬರಬೇಕೆಂಬ ಆಶಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ. ಡಿ ಸುದರ್ಶನ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ಬಿ. ಎಸ್ ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…