ಮೈಸೂರು

ಕೆಎಂಪಿಕೆ ಟ್ರಸ್ಟ್ ವತಿಯಿಂದ ಪಂಡಿತ್ ರಾಜೀವ್ ತಾರಾನಾಥ್ ಅವರಿಗೆ ಸಂತಾಪ

ಮೈಸೂರು: ನಗರದ ಚಾಮರಾಜಪುರಂನಲ್ಲಿರುವ ಕೆಎಂಪಿಕೆ ಟ್ರಸ್ಟ್ ಆವರಣದಲ್ಲಿ ಸಂಗೀತ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ರವರ ಸಂತಾಪ ಸೂಚಿಸಲಾಯಿತು.

ಬಳಿಕ ಮಾತನಾಡಿದ ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ಕಲಾವಿದರ ತವರೂರು, ಮೈಸೂರು ಮಹಾರಾಜರ ಕೊಡುಗೆಯಿಂದಾಗಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತಗಳು ಶಾಶ್ವತವಾಗಿ ನೆಲೆಯೂರಿತು ಪಂಡಿತ್ ತಾರಾನಾಥ್ ರವರ ಸುಪುತ್ರ ಪಂಡಿತ್ ರಾಜೀವ್ ತಾರಾನಾಥ್ ರವರು ಮೈಸೂರಿನ ಸಂಗೀತ ಪರಂಪರೆಗೆ ಅಪಾರ ಕೊಡುಗೆ ನೀಡಿದ್ದಾರೆ, ದೇಶ ವಿದೇಶದಲ್ಲೂ ಇಂದು ಅವರನ್ನು ಸ್ಮರಿಸುತ್ತಿರುವುದು ಕರ್ನಾಟಕದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಮೈಸೂರು ಜಿಲ್ಲಾಡಳಿತ ಮೈಸೂರು ದಸರಾ ಸಂದರ್ಭದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ರವರ ಸಂಗೀತ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಮತ್ತು ವಾದ್ಯ ಪರಿಕರಗಳ ಸಂಗೀತ ಪ್ರದರ್ಶನಗಳನ್ನು ಆಯೋಜಿಸಲಿ ಎಂದು ಮನವಿ ಮಾಡಿದರು.

ಬಳಿಕ ಮಾತನಾಡಿದ ಪ್ರಸಾದ್ ಸ್ಕೂಲ್ ಆಫ್ ರಿದಮ್ ತಾಳವಾದ್ಯ ಪ್ರತಿಷ್ಠಾನದ ಸಂಸ್ಥಾಪಕ ಡಾ. ರಾಘವೇಂದ್ರ ಪ್ರಸಾದ್ ಮಾತನಾಡಿ ಪ.ರಾಜೀವ್ ತಾರಾನಾಥ್ ರವರ ಮುಗ್ಧ ಸ್ವಭಾವ ಸಣ್ಣ ಮಕ್ಕಳಿಗೂ ಸಹ ಅರಿವಾಗುವ ರೀತಿಯಲ್ಲಿ, ಅವರು ಸಂಗೀತದ ಶಿಕ್ಷಣ ನೀಡುತ್ತಿದ್ದರು, ಹಿಂದುಸ್ಥಾನಿ ಅಲ್ಲದೆ ಕರ್ನಾಟಿಕ್ ಶಾಸ್ತ್ರೀಯ ಸಂಗೀತದ ಅರಿವು ಅವರಿಗಿತ್ತು ಎಂದು ಬಣ್ಣಿಸಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಡಾ ರಾಘವೇಂದ್ರ ಪ್ರಸಾದ್, ಹಿರಿಯ ತಬಲ ವಾದಕರಾದ ರಮೇಶ್ ದನ್ನೂರು, ಹಿಂದುಸ್ತಾನಿ ಗಾಯಕ ಪ್ರಭುರಾವ್, ಮಾಜಿನಗರ ಪಾಲಿಕೆ ಸದಸ್ಯ ಎಂ.ಡಿ ಪಾರ್ಥಸಾರಥಿ, ರವಿ, ಕೆ.ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಜೆಡಿಎಸ್ ನಗರ ಕಾರ್ಯದಕ್ಷ ಪ್ರಕಾಶ್ ಪ್ರಿಯದರ್ಶನ್, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಜಿ ರಾಘವೇಂದ್ರ, ಕಲಾವಿದರ ಸಂಘದ ಕಾರ್ಯದರ್ಶಿ ಗುರುದತ್, ಸೂಚಿಂದ್ರ, ಮಿರ್ಲೆ ಪನೀಶ್, ಸಚಿನ್, ಹಾಗೂ ಇನ್ನಿತರರು ಸಂತಾಪ ಸಭೆಯಲ್ಲಿ ಭಾಗಿಯಾಗಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಅರಳುವ ಪ್ರತಿಭೆಗಳಿಗೆ ಸಮಯ ಹೆಚ್ಚು ಸಿಗಲಿ

ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…

3 hours ago

ಅಗಲಿದ ದೃಶ್ಯಬ್ರಹ್ಮ ಸಿಂಗೀತಂ, ‘ನಟಸಮ್ರಾಟ್’ ನಾನಾ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ   ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…

3 hours ago

ಮಹಾಲಯ ಅಮಾವಾಸ್ಯೆಗೆ ಮ.ಬೆಟ್ಟ ಸಜ್ಜು

ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ  ಹನೂರು: ಮಹಾಲಯ ಅಮಾವಾಸ್ಯೆ…

3 hours ago

ಮಹೇಂದ್ರನ ಸುತ್ತ ಅನುಮಾನದ ಹುತ್ತ!

ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…

4 hours ago

ನಲ್ಲೂರು ಅಮಾನಿ ಕೆರೆಗೆ ಹರಿದು ಬಂದ ನೀರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ  ಗುಂಡ್ಲುಪೇಟೆ:…

4 hours ago

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

18 hours ago