ಮೈಸೂರು : ಪ್ರತಿಯೊಬ್ಬರೂ ಮತದಾನದ ಪ್ರಾಮುಖ್ಯತೆ ತಿಳಿದು ತಮ್ಮ ಹಕ್ಕು ಚಲಾಯಿಸಬೇಕು ಎಂದು ಸಹಾಯಕ ಸ್ವೀಪ್ ನೋಡಲ್ ಅಧಿಕಾರಿ ಎಂ.ಶಾಂತ ತಿಳಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯಾವುದೇ ಮತದಾರರು ಆಸೆ ಆಮಿಷಗಳಿಗೆ ಒಳಗಾಗದೆ ಸ್ವಯಂ ನಿರ್ಣಯ ಕೈಗೊಂಡು ಉತ್ತಮ ನಾಯಕನನ್ನು ಆಯ್ಕೆ ಮಾಡಲು ನೈತಿಕ ಮತದಾನ ಮಾಡಬೇಕು ಎಂದು ಹೇಳಿದರು.
ಜನರಿಗೆ ಮತದಾನದ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ನೋಂದಣಿ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿ, ಪ್ರತಿಯೊಬ್ಬ ಮತದಾರನೂ ಮತದಾನದಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಶಾಂತಾ ಸೂಚಿಸಿದರು.
ಕಾರ್ಯಕ್ರಮದಲ್ಲಿ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಡಾ.ರಂಜಿನಿ, ಪ್ರೌಢಶಾಲಾ ವಿಭಾಗದ ನೋಡಲ್ ಅಧಿಕಾರಿ ದೇವರಾಜು, ಸದಸ್ಯರಾದ ಡಾ.ಹೇಮಲತಾ, ಡಾ. ಶಶಿಕಲಾ, ಡಾ. ಮಂಗಳ ಮೂರ್ತಿ, ಹೆಚ್. ಎಸ್ ಪ್ರಕಾಶ್, ಮಂಜುನಾಥ್. ಬಿ., ಶಿವಕುಮಾರ್ ಬಿ. ಎಲ್., ನಾಗಚಂದ್ರ, ರಮೇಶ್ ಬಿ. ಮತ್ತಿತರರು ಉಪಸ್ಥಿತರಿದ್ದರು
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…