ಎಚ್.ಡಿ.ಕೋಟೆ : ಜಮೀನಿನಲ್ಲಿ ದನ ಮೇಯಿಸುತ್ತಿದ್ದಾಗ ಆದಿವಾಸಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.
ಬಂಡೀಪುರ ಅಭಯಾರಣ್ಯದ ಎನ್.ಬೇಗೂರು ಅರಣ್ಯ ವಲಯ ವ್ಯಾಪ್ತಿಯ ಮಾಳದ ಹಾಡಿಯ ಕೆಂಚ (೬೭) ಹುಲಿ ದಾಳಿಯಿಂದ ಸಾವಿಗೀಡಾಗಿರುವ ವ್ಯಕ್ತಿ.
ಕಾಡಿನ ಸಮೀಪದಲ್ಲಿರುವ ಮಾಳದ ಹಾಡಿಯ ಜಮೀನಿನಲ್ಲಿ ಶನಿವಾರ ಕೆಂಚ ಕೆಲಸ ಮಾಡಿಕೊಂಡು ದನ ಮೇಯಿಸುತ್ತಿದ್ದಾಗ ಸಂಜೆ ವೇಳೆ ಹುಲಿ ದಾಳಿ ನಡೆಸಿ ಕಾಡಿಗೆ ಎಳೆದುಕೊಂಡು ಹೋಗಿ ತಿಂದಿದೆ.
ಶನಿವಾರ ರಾತ್ರಿ ತನ್ನ ಪತಿ ಮನೆಗೆ ಬಾರದೇ ಇದ್ದಾಗ ಪತ್ನಿ ಮಾರೆ ಎಲ್ಲಾ ಕಡೆ ಹುಡುಕಿದ್ದಾರೆ. ಆದರೆ ಸುಳಿವೇ ಸಿಗಲಿಲ್ಲ. ನಂತರ ಅರಣ್ಯ ಅಧಿಕಾರಿಗಳಿಗೆ ವಿಚಾರ ತಿಳಿಸಿದ್ದು, ಕಾಡಿನೊಳಗೆ ಪರಿಶೀಲಿಸಿದಾಗ ಹುಲಿ ದಾಳಿಯಿಂದ ಸಾವನ್ನಪ್ಪಿರುವ ಕೆಂಚನ ಮೃತದೇಹ ಪತ್ತೆಯಾಗಿದೆ.
ಸ್ಥಳಕ್ಕೆ ಎಸಿಎಫ್ ಸತೀಶ್, ಅರಣ್ಯ ಅಧಿಕಾರಿ ಅಮೃತೇಶ್, ಗಿರಿಜನ ಮುಖಂಡರುಗಳಾದ ಶೈಲೇಂದ್ರ, ಪುಟ್ಟಬಸವ, ಸಿದ್ದರಾಜು, ದಾಸಪ್ಪ, ಇತರರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಹುಲಿ ದಾಳಿಯಿಂದ ಕೆಂಚ ಮೃತಪಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದನ್ನೆಲ್ಲ ಪರಿಶೀಲಿಸಿ ಅವರ ಕುಟುಂಬಕ್ಕೆ ೧೫ ಲಕ್ಷ ರೂ. ಪರಿಹಾರದ ಹಣವನ್ನು ಶಾಸಕರಾದ ಅನಿಲ್ ಚಿಕ್ಕಮಾದು ಅವರ ಸಮ್ಮುಖದಲ್ಲಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…
ಮೈಸೂರು: ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಕ್ರಮ ಮದ್ಯ ಹಾಗೂ ಮಾದಕ ವಸ್ತುಗಳ ಮಾರಾಟ ತಡೆಯಲು…