Mysore
25
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಕುಮಾರಸ್ವಾಮಿ ಕೂಡ ಮುಡಾದಲ್ಲಿ ಬದಲಿ ನಿವೇಶನ ಪಡೆದಿದ್ದಾರೆ, ಶೀಘ್ರವೇ ದಾಖಲೆ ಬಿಡುಗಡೆ ಮಾಡುವೆ ; ಎಂ.ಲಕ್ಷ್ಮಣ್

ಮೈಸೂರು : ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಕೂಡ ಮುಡಾ ದಲ್ಲಿ ಬದಲಿ ನಿವೇಶನ ಪಡೆದಿದ್ದಾರೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಅವರು ಯಾವ ರೀತಿ ನಿವೇಶನ ಪಡೆದಿದ್ದಾರೆ ಎಂಬುವುದನ್ನ ದಾಖಲೆ ಸಮೇತ ಬಿಡುಗಡೆ ಮಾಡುವೆ ಎಂದು  ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ಹೇಳಿದ್ದಾರೆ.

ಸೋಮವಾರ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರ ಪಾತ್ರವೇ ಹೆಚ್ಚಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಾಲು ಕೂಡ ಇದೆ. ಸಂಬಂಧಿಕರ ಮುಖಾಂತರ ವಿಜಯೇಂದ್ರ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ ಬಿಜೆಪಿ ನಾಯಕರು ಜಮೀನಿನ ಮೂಲ ಮಾಲೀಕ ಎನ್ನುತ್ತಿರುವ ನಿಂಗ ಎಂಬುವರ ಮೊಮ್ಮಕ್ಕಳ ಮುಖಾಂತರ ಡಿಸಿಗೆ ದೂರು ಕೊಡಿಸಿದ್ದಾರೆ.  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ತಪ್ಪಿತಸ್ಥರು ಎಂದು ಬಿಂಬಿಸುವ ಪ್ರಯತ್ನ ಆಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ಸಿಎಂ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!