ಮೈಸೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೂಡ ಮುಡಾ ದಲ್ಲಿ ಬದಲಿ ನಿವೇಶನ ಪಡೆದಿದ್ದಾರೆ. ಶೀಘ್ರದಲ್ಲೇ ಬೆಂಗಳೂರಿನಲ್ಲಿ ಅವರು ಯಾವ ರೀತಿ ನಿವೇಶನ ಪಡೆದಿದ್ದಾರೆ ಎಂಬುವುದನ್ನ ದಾಖಲೆ ಸಮೇತ ಬಿಡುಗಡೆ ಮಾಡುವೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ.
ಸೋಮವಾರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಾತ್ರವೇ ಹೆಚ್ಚಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಾಲು ಕೂಡ ಇದೆ. ಸಂಬಂಧಿಕರ ಮುಖಾಂತರ ವಿಜಯೇಂದ್ರ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದರು.
ಅಲ್ಲದೆ ಬಿಜೆಪಿ ನಾಯಕರು ಜಮೀನಿನ ಮೂಲ ಮಾಲೀಕ ಎನ್ನುತ್ತಿರುವ ನಿಂಗ ಎಂಬುವರ ಮೊಮ್ಮಕ್ಕಳ ಮುಖಾಂತರ ಡಿಸಿಗೆ ದೂರು ಕೊಡಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ತಪ್ಪಿತಸ್ಥರು ಎಂದು ಬಿಂಬಿಸುವ ಪ್ರಯತ್ನ ಆಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು ಸಿಎಂ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…