ಮೈಸೂರು

ವಿಶ್ವನಾಥ್ ಗೆ ತಲೆಕೆಟ್ಟಿದೆ ಅನ್ಸುತ್ತೆ, ಆರೋಪಗಳಿಗೆ ದಾಖಲೆಗಳಿಟ್ಟು ಮಾತನಾಡಿ: ಎಂ.ಲಕ್ಷ್ಮಣ್‌

ಮೈಸೂರು : ವಿಶ್ವನಾಥ್‌ ಗೆ ತಲೆಕೆಟ್ಟಿದೆ  ಅನ್ಸುತ್ತೆ ಹುಚ್ಚು  ಹುಚ್ಚು ರೀತಿ ಮಾತನಾಡುವುದನ್ನ ನಿಲ್ಲಿಸಿ ನೀವು ಮಾಡುವ ಆರೋಪಗಳಿಗೆ ದಾಖಲೆಗಳಿದ್ರೆ ಅದನ್ನ ಇಟ್ಟು ಮಾತನಾಡಿ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ ವಾಗ್ದಾಳಿ ನಡೆಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಕ್ರಮ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮ ವಿಚಾರದಲ್ಲೆ ಸಿದ್ದರಾಮಯ್ಯ ಅವರ ಪತ್ನಿ ಹೆಸರು ಬರುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್‌ ದಾಖಲೆಗಳು ಇಲ್ಲದೆ ಹಿಟ್‌ ಅಂಡ್‌ ರನ್‌ ಕೇಸ್‌ ಮಾಡುವುದು ಸರಿಯಲ್ಲ.ಮಾತನಾಡುವ ಹಕ್ಕಿದೆ, ಆದರೆ ಸುಳ್ಳು ಆರೋಪ ಮಾಡುವುದಕ್ಕೆ ಹಕ್ಕಿಲ್ಲ. ಬಿಜೆಪಿ ಎಂಎಲ್ಸಿ‌ ವಿಶ್ವನಾಥ್ ಸಿದ್ದರಾಮಯ್ಯ ಹೆಂಡತಿ ಪಾರ್ವತಿ ಮೇಲೆ ಆಪಾದನೆ ಮಾಡಿದ್ದಾರೆ. ದಾಖಲೆಗಳನ್ನ ನಾವು ನಿಮಗೆ ಕಳಿಸಿಕೊಡುತ್ತೇವೆ ಅದನ್ನ ನೋಡಿ ಮಾಡನಾಡಿ. ಸುಖಸುಮ್ಮನೆ ಆರೋಪ ಮಾಡೋದು ಸರಿಯಲ್ಲ.  ಬಿಜೆಪಿ ಆಡಳಿತ ಅವಧಿಯಲ್ಲಿ ನಡೆದಿರುವ ಅಕ್ರಮ ಇದು, ಇವರ ಮೇಲೆ ಶಿಸ್ತು ಕ್ರಮ ಜರುಗಿಸಲು ನಮ್ಮ ಸರ್ಕಾರ ಈಗ ಉನ್ನತಮಟ್ಟದ ತನಿಖಾ ತಂಡ ರಚಿಸಿದೆ ಎಂದು ಸಮರ್ಥನೆ ಮಾಡಿಕೊಂಡರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

1 hour ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

2 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

2 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

2 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

2 hours ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

2 hours ago