ಮೈಸೂರು : ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ನಡೆಯಿತು.
ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಮೈಸೂರಿಗೆ ಸಿದ್ದರಾಮಯ್ಯನವರ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಕೆಪಿಸಿಸಿ ವಕ್ತಾರ ಎಂ ಲಕ್ಶ್ಮಣ್, ಸೆಪ್ಟೆಂಬರ್ 6ರಂದು ಪ್ರತಾಪ್ ಸಿಂಹ ಕಚೇರಿ ಮುಂಭಾಗ ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಅದರಂತೆ ಸಂಸದ ಪ್ರತಾಪ್ ಸಿಂಹ ಕಚೇರಿಗೆ ದಾಖಲೆಗಳ ಸಮೇತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆಗಮಿಸಿದ್ದರು. ಆದರೆ, ಲಕ್ಷ್ಮಣ್ ಅವರನ್ನು ಪೊಲೀಸರು ಒಳಗೆ ಬಿಡಲಿಲ್ಲ.
ಆದ್ದರಿಂದ ಜಲದರ್ಶಿನಿ ಗೇಟ್ ಮುಂಭಾಗವೇ ಲಕ್ಷ್ಮಣ್ ನಿಂತಿದ್ದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಲಕ್ಷ್ಮಣ್‌ಗೆ ಸಾಥ್ ನೀಡಿದರು. ಕಾಂಗ್ರೆಸ್ ನಾಯಕರು ಆಗಮಿಸುವ ಹಿನ್ನೆಲೆ ಸಂಸದ ಪ್ರತಾಪ್ ಸಿಂಹ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಬಳಿಕ ಮಾತನಾಡಿದ ಲಕ್ಷ್ಮಣ್, ʼʼಮೈಸೂರಿಗೆ ಪ್ರತಾಪ್ ಸಿಂಹ ನಯಾಪೈಸೆ ಕೆಲಸ ಮಾಡಿಲ್ಲ. ಅವರದ್ದೇ ಬಿಜೆಪಿ ಸರ್ಕಾರ ಇತ್ತು. ಅವರ ವಿಶ್ವಗುರು ಪ್ರಧಾನಿ ಆಗಿದ್ದರು. ಸಂಸದರಾಗಿ ಪ್ರತಾಪ್ ಸಿಂಹ ನೀವೇನು ಕೊಟ್ಟಿದ್ದೀರಿ? ರಿಂಗ್ ರೋಡ್ ಆಗಿದ್ದು ಎಡಿಬಿ ಸಾಲದಲ್ಲಿ. ಕಾರ್ಪೊರೇಟರ್ ಮಾಡಿದ್ದನ್ನು ನಾನು ಮಾಡಿದ್ದೇನೆ ಅಂತ ಹೇಳಿಕೊಳ್ಳುತ್ತಾರೆʼʼ ಎಂದು ಕಿಡಿಕಾರಿದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…