ಮೈಸೂರು

ಕ್ಷೇತ್ರ ಪುನರ್ವಿಂಗಡಣೆಯಿಂದ ದಕ್ಷಿಣ ರಾಜ್ಯಗಳಿಗೆ ಅನ್ಯಾಯ ; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ

ಮೈಸೂರು : ಡಿಲಿಮಿಟೇಶನ್ ಕಾಯ್ದೆ (ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆ)ಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶೇ.33 ರಷ್ಟು ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳಿಸುವುದಕ್ಕೆ ಕಾಂಗ್ರೆಸ್‌ನ ಯಾವುದೇ ತಕರಾರಿಲ್ಲ. 1998ರಲ್ಲಿ ಮಹಿಳಾ ಮೀಸಲಾತಿ ಮಸೂದೆ ಪರಿಚಯಿಸಿ, 2010ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ರಾಜ್ಯಸಭೆಯಲ್ಲಿ ಅಂಗೀಕಾರ ಮಾಡಲಾಗಿತ್ತು. ಆದರೆ, ಈಗ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಜೊತೆಗೆ ಡಿಲಿಮಿಟೇಶನ್ ಕಾಯ್ದೆ ಜಾರಿಗೊಳಿಸುತ್ತಿರುವುದರಲ್ಲಿ ಬಿಜೆಪಿಯ ಕುತಂತ್ರ ಅಡಗಿದೆ ಎಂದರು.

ಲೋಕಸಭೆಯ 543 ಸ್ಥಾನಗಳಲ್ಲಿ ಶೇ.50 ರಷ್ಟು ಸ್ಥಾನಗಳನ್ನು ಹೆಚ್ಚಿಸುವ ಉದ್ದೇಶವುಳ್ಳ ಡಿಲಿಮಿಟೇಶನ್ ಕಾಯ್ದೆ ಜಾರಿಯಿಂದ ದಕ್ಷಿಣ ಭಾರತ ಆರು ರಾಜ್ಯಗಳಿಗೆ ಅನ್ಯಾಯವಾಗಲಿದೆ. ಕರ್ನಾಟಕದ 28 ಲೋಕಸಭಾ ಸ್ಥಾನಗಳ ಶೇ.50 ರಷ್ಟು ಅಂದರೆ 14 ಸ್ಥಾನಗಳು ಹೆಚ್ಚಾಗಿ ಒಟ್ಟು 42 ಲೋಕಸಭಾ ಸ್ಥಾನಗಳಾಗಬೇಕು. ಆದರೆ, ಕಾಯ್ದೆಯಲ್ಲಿ 41 ಸ್ಥಾನಗಳೆಂದು ತೋರಿಸಲಾಗಿದೆ. ಹಾಗೆಯೇ ಕೇರಳ ರಾಜ್ಯದಲ್ಲಿ 21 ಲೋಕಸಭಾ ಸ್ಥಾನಗಳಿದ್ದು, ಶೇ.50 ರಷ್ಟು ಹೆಚ್ಚಳವಾದರೆ ಒಟ್ಟು 40 ಸ್ಥಾನಗಳಾಗಬೇಕು. ಆದರೆ, ಕಾಯ್ದೆಯಲ್ಲಿ ಕೇವಲ 2 ಸ್ಥಾನಗಳನ್ನು ಹೆಚ್ಚಿಸಿ 22 ಲೋಕಸಭಾ ಸ್ಥಾನಗಳೆಂದು ವಿಂಗಡಿಸಲಾಗಿದೆ. ತಮಿಳುನಾಡಲ್ಲೂ 39 ರಿಂದ 60 ಸ್ಥಾನವಾಗಬೇಕು. ಆದರೆ 48 ಸ್ಥಾನಗಳನ್ನು ತೋರಿಸಲಾಗಿದೆ. ಅದೇ ರೀತಿ ಬಿಜೆಪಿ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿರುವ 80 ಲೋಕಸಭಾ ಸ್ಥಾನಗಳು ಡಿಲಿಮಿಟೇಶನ್ ಕಾಯ್ದೆಯಿಂದ 120 ಸ್ಥಾನಗಳಾಗಬೇಕು. ಆದರೆ 142 ಸ್ಥಾನಗಳೆಂದು ಕಾಯ್ದೆಯಲ್ಲಿ ತೋರಿಸಲಾಗಿದ್ದು, ಯಾರಿಗೂ ಅರ್ಥವಾಗದ ಮಾನದಂಡದಲ್ಲಿ ಪುನರ್ವಿಂಗಡಣೆ ಮಾಡಿ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣೆಯಾದರೂ ಒಟ್ಟು 580 ಲೋಕಸಭಾ ಸ್ಥಾನಗಳಾಗಬೇಕು. ಆದರೆ ಕಾಯ್ದೆಯಲ್ಲಿ ಉತ್ತರ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಿ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಲೋಕಸಭಾ ಸ್ಥಾನಗಳನ್ನು ಕಡಿಮೆ ಮಾಡುವ ಮೂಲಕ ಅನ್ಯಾಯ ಮಾಡಲಾಗುತ್ತಿದೆ. ದೇಶದ ಆದಾಯದಲ್ಲಿ ಶೇ.40 ರಷ್ಟು ಪಾಲು ದಕ್ಷಿಣ ಭಾರತದ ರಾಜ್ಯಗಳಾಗಿದೆ. ಅಲ್ಲದೆ ಜನಸಂಖ್ಯೆ ನಿಯಂತ್ರಣ ಪಾಲನೆಯಲ್ಲೂ ದಕ್ಷಿಣ ಭಾರತದ ರಾಜ್ಯಗಳು ಮುಂದಿವೆ. 2 ಲಕ್ಷ ಕೋಟಿ ರೂ.ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ದಕ್ಷಿಣ ಭಾರತದಿಂದ 7.5 ಲಕ್ಷ ಕೋಟಿ ರೂ.ಸಂಗ್ರಹವಾಗುತ್ತಿದೆ. ಒಟ್ಟಾರೆ ತೆರಿಗೆಯಲ್ಲಿ ರಾಜ್ಯದಿಂದಲೇ 5 ಲಕ್ಷ ಕೋಟಿ ರೂ.ಗಳನ್ನು ಕೇಂದ್ರಕ್ಕೆ ಕೊಡಲಾಗುತ್ತಿದೆ. ಇಷ್ಟೆಲ್ಲಾ ಇದ್ದರೂ ಜನರ ದಿಕ್ಕು ತಪ್ಪಿಸಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ನಾಲ್ಕೈದು ರಾಜ್ಯಗಳಲ್ಲಿ ಗೆದ್ದು, ಇಡೀ ರಾಷ್ಟ್ರದ ಅಧಿಕಾರ ಹಿಡಿಯುವ ಹುನ್ನಾರವೇ ಡಿಲಿಮಿಟೇಶನ್ ಕಾಯ್ದೆಯಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಮುಖಂಡರಾದ ಶಿವಣ್ಣ, ಬಿ.ಎಂ.ರಾಮು, ಗೋಪಿನಾಥ್, ಗಿರೀಶ್, ಮಹೇಶ್, ರಾಹುಲ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

2 hours ago