ಮೈಸೂರು: ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನುಕರ್ನಾಟಕ ಲೋಕಸೇವಾ ಆಯೋಗವು ಆಗಸ್ಟ್ 17ರ ಮಂಗಳವಾರ ನಡೆಸಲಿದೆ. ರಾಜ್ಯಾದದ್ಯಾಂತ ಸುಮಾರು 2,10,910ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಲಿದ್ದಾರೆ. ಇನ್ನೂ ಮೈಸೂರಲ್ಲೂ ಕೂಡ ಪರೀಕ್ಷೆ ನಡೆಯಲಿದ್ದು, ನಗರದ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ ಬೆಳಿಗ್ಗೆ 6 ಗಂಟೆಯಿoದ ಸಂಜೆ 6 ಗಂಟೆಯವರಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಸೆಕ್ಷನ್ 163 ರ ರೀತ್ಯ 200 ಮೀಟರ್ ವ್ಯಾಪ್ತಿಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ನಡೆಯುವ ಕಾಲೇಜು ಇಂತಿವೆ:
ಮಹಾರಾಜ ಸರ್ಕಾರ ಪದವಿ ಪೂರ್ವ ಕಾಲೇಜು ಜೆ.ಎಲ್.ಬಿ ರಸ್ತೆ, ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜು ಎನ್‌ಎಸ್ ರಸ್ತೆ, ಮೈಸೂರು ಯೂನಿವರ್ಸಿಟಿ ಮಹಾರಾಜ ಕಾಲೇಜು ಜೆ.ಎಲ್.ಬಿ ರಸ್ತೆ, ಮಹಾರಾಣಿ ಸರ್ಕಾರಿ ಮಹಿಳಾ ಕಲಾ ಕಾಲೇಜು ಜೆ.ಎಲ್.ಬಿ ರಸ್ತೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಎ ಮತ್ತು ಬಿ ಬ್ಲಾಕ್ ಮುಕ್ತ ಗಂಗೋತ್ರಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಎಂ ಜಿ ಕೊಪ್ಪಲು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪೀಪಲ್ಸ್ ಪಾರ್ಕ್, ಸರ್ಕಾರಿ ಪದವಿ ಪೂರ್ವ ಕಾಲೇಜು ಅನಿಕೇತನ ರಸ್ತೆ. ಕುವೆಂಪುನಗರ, ಟೆರಿಷಿಯನ್ ಪದವಿ ಪೂರ್ವ ಕಾಲೇಜು ಸಿದ್ದಾರ್ಥ ನಗರ ಹಾಗೂ ಸರ್ಕಾರಿ ಆದರ್ಶ ವಿದ್ಯಾಲಯ ಜಾಕಿ ಕ್ವಾರ್ಟರ್ಸ್ ಎಂಜಿ ರಸ್ತೆಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳನ್ನು ಹೊರತುಪಡಿಸಿ ಇತರೆ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರು ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್/ಬ್ರೌಸಿಂಗ್ ಸೆಂಟರ್‌ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…